ಭಾನುವಾರ, ಮಾರ್ಚ್ 29, 2020
19 °C

ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳ ಮೇಲೆ ಹಲ್ಲೆ ಪ್ರಕರಣ: ದೂರು ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳ ಮೇಲೆ ಕೋರ್ಟ್ ಆವರಣದಲ್ಲಿ ಹಲ್ಲೆ ನಡೆಸಿದವರ ವಿರುದ್ಧ ವಿದ್ಯಾನಗರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೇಶದ್ರೋಹ ಪ್ರಕರಣದ ಆರೋಪದ ಮೇಲೆ ಕೆಎಲ್‌ಇ ಎಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿ ಕೋರ್ಟ್‌ಗೆ ಕರೆತರಲಾಗಿತ್ತು. ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ ಮೇಲೆ ಅವರನ್ನು ಕರೆದೊಯ್ಯುವಾಗ ಕೆಲವರು ಹಲ್ಲೆ ನಡೆಸಿದ್ದರು. ಪೊಲೀಸ್ ವ್ಯಾನ್‌ಗೆ ಬೂಟು, ಚಪ್ಪಲಿ ಎಸೆದಿದ್ದರು ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ವಿದ್ಯಾನಗರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಆನಂದ ವಣಕುದುರೆ, ಹದಿನೈದು ಮಂದಿ ವಿರುದ್ಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು