ಬಡ್ತಿ, ವರ್ಗಾವಣೆ ತಡೆಗೆ ರಾಜ್ಯಪಾಲರಿಗೆ ಮನವಿ

ಶುಕ್ರವಾರ, ಜೂಲೈ 19, 2019
26 °C

ಬಡ್ತಿ, ವರ್ಗಾವಣೆ ತಡೆಗೆ ರಾಜ್ಯಪಾಲರಿಗೆ ಮನವಿ

Published:
Updated:
Prajavani

ಬೆಂಗಳೂರು: ಮೈತ್ರಿ ಸರ್ಕಾರ ಜುಲೈ 1ರಿಂದ 10ರ ಅವಧಿಯಲ್ಲಿ ಮಾಡಿರುವ ವರ್ಗಾವಣೆಗಳು ಹಾಗೂ ಬಡ್ತಿ ಪ್ರಕ್ರಿಯೆಗಳಿಗೆ ತಡೆ ನೀಡಬೇಕು ಎಂದು ಕೋರಿ ಬಿಜೆಪಿ ರಾಜ್ಯ ರೈತ ಮೋರ್ಚಾದ ಉಪಾಧ್ಯಕ್ಷ ಎಸ್.ಲಿಂಗಮೂರ್ತಿ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಗುರುವಾರ ಮನವಿ ಮಾಡಿದ್ದಾರೆ.

‘ಬಡ್ತಿ ಮೀಸಲಾತಿ ಕಾಯ್ದೆ ಪ್ರಕಾರ, ಲೋಕೋಪಯೋಗಿ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಎಂಜಿನಿಯರ್‌ಗಳಿಗೆ ಬಡ್ತಿ ನೀಡಲು ಸಚಿವರು ಸತಾಯಿಸುತ್ತಿದ್ದಾರೆ. ಆದರೆ, ತರಾತುರಿಯಲ್ಲಿ 800 ಎಂಜಿನಿಯರ್‌ಗಳಿಗೆ ಬಡ್ತಿ ನೀಡಲು ಪ್ರಕ್ರಿಯೆ ನಡೆಸಲಾಗಿದೆ. ಇದಕ್ಕಾಗಿ ಪ್ರತಿದಿನ ₹50 ಕೋಟಿ ಸಂಗ್ರಹಿಸಲಾಗಿದೆ. ಕಳೆದ 10 ದಿನಗಳಲ್ಲಿ ಬಡ್ತಿ ಹಾಗೂ ವರ್ಗಾವಣೆಗಾಗಿ ₹500 ಕೋಟಿ ವಸೂಲಿ ಮಾಡಲಾಗಿದೆ’ ಎಂದು ಅವರು ಆರೋಪಿಸಿದ್ದಾರೆ.

ರೇವಣ್ಣ ತಿರುಪತಿಗೆ: ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿಕೂಟದ ಶಾಸಕರ ರಾಜೀನಾಮೆ ಪರ್ವ ಮುಂದುವರಿದಿರುವ ಬೆನ್ನಲ್ಲೇ, ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಅವರು ತಿರುಪತಿಯಲ್ಲಿ ವೆಂಕಟೇಶ್ವರ ಸ್ವಾಮಿ ದೇವರ ದರ್ಶನವನ್ನು ಪಡೆದಿದ್ದಾರೆ. ಅವರ ಜತೆಗೆ, ಇಲಾಖೆಯ ಕಾರ್ಯದರ್ಶಿ ಕೃಷ್ಣಾ ರೆಡ್ಡಿ, ಸೂಪರಿಂಟೆಂಡಿಂಗ್‌ ಎಂಜಿನಿಯರ್‌ ಮೋಹನ್‌ ಹೋಗಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !