ಬಡ್ತಿ ಮೀಸಲಾತಿ: ವಿಚಾರಣೆ ಮತ್ತೆ ಮುಂದಕ್ಕೆ

7

ಬಡ್ತಿ ಮೀಸಲಾತಿ: ವಿಚಾರಣೆ ಮತ್ತೆ ಮುಂದಕ್ಕೆ

Published:
Updated:
Deccan Herald

ನವದೆಹಲಿ: ‘ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಸರ್ಕಾರಿ ನೌಕರರಿಗೆ ತತ್ಪರಿಣಾಮ ಜ್ಯೇಷ್ಠತೆ ವಿಸ್ತರಿಸುವ’ ರಾಜ್ಯ ಸರ್ಕಾರದ ಕಾಯ್ದೆಯ ಕಾನೂನು ಮಾನ್ಯತೆ ಪ್ರಶ್ನಿಸಿ ಬಿ.ಕೆ. ಪವಿತ್ರ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದಿನ ವಾರಕ್ಕೆ ಮುಂದೂಡಿದೆ.

ಪ್ರಕರಣದ ವಿಚಾರಣೆಯನ್ನು ಐದನೇ ಬಾರಿಗೆ ಮುಂದಕ್ಕೆ ಹಾಕಲಾಗುತ್ತಿದೆ. ಇದರಿಂದ ಕಕ್ಷಿದಾರರಿಗೆ ತೊಂದರೆಯಾಗಲಿದೆ. ಪ್ರಕರಣದ ವಿಚಾರಣೆ ತುರ್ತಾಗಿದ್ದು, ಆದ್ಯತೆಯ ಮೇಲೆ ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದು ಕಾಯ್ದೆಯನ್ನು ಬೆಂಬಲಿಸಿ ಅರ್ಜಿ ಸಲ್ಲಿಸಿದವರ ಪರ ವಕೀಲರಾದ ಇಂದಿರಾ ಜೈಸಿಂಗ್‌ ಅವರು ಬುಧವಾರ ನ್ಯಾಯಪೀಠವನ್ನು ಕೋರಿದರು.

ಆದರೆ, ನ್ಯಾಯಮೂರ್ತಿಗಳಾದ ಅಭಯ್‌ ಮನೋಹರ್‌ ಸಪ್ರೆ ಹಾಗೂ ಇಂದೂ ಮಲ್ಹೋತ್ರಾ ಅವರಿದ್ದ ಪೀಠ ಅದನ್ನು ಮಾನ್ಯ ಮಾಡಲಿಲ್ಲ.

ನ್ಯಾಯಮೂರ್ತಿ ಯು.ಯು. ಲಲಿತ್‌ ಅವರಿದ್ದ ಪೀಠ 2017ರ ಫೆಬ್ರುವರಿ 9ರಂದು ಈ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ನೀಡಿದ್ದು, ಅವರಿದ್ದ ಪೀಠವೇ ಮುಂದಿನ ಬುಧವಾರ (ಅಕ್ಟೋಬರ್‌ 10) ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !