ಮಂಗಳವಾರ, ಜನವರಿ 21, 2020
29 °C

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಬಡ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೂವರು ಐಎಎಸ್ ಹಿರಿಯ ಅಧಿಕಾರಿಗಳಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಬಡ್ತಿನೀಡಿ ಆದೇಶಿಸಲಾಗಿದೆ.

ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಯೋಜನೆ ಹಾಗೂ ಕಾರ್ಯಕ್ರಮ ನಿರ್ವಹಣೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ಬಡ್ತಿ ನೀಡಲಾಗಿದ್ದು, ಸಂಬಂಧಿಸಿದ ಇಲಾಖೆಗಳಲ್ಲೇ ಮುಂದುವರಿಸಲಾಗಿದೆ.

ನಿಯೋಜನೆ ಮೇಲೆ ಕೇಂದ್ರ ಸೇವೆಯಲ್ಲಿರುವ ಹಣಕಾಸು ಸಚಿವಾಲಯದ ಕಂದಾಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಅನಿಲ್ ಕುಮಾರ್ ಝಾ ಅವರಿಗೆ ಅಪೆಕ್ಸ್ ಸ್ಕೇಲ್‌ಗೆ ಬಡ್ತಿ ನೀಡಲಾಗಿದೆ.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು