ಗುರುವಾರ , ಆಗಸ್ಟ್ 5, 2021
24 °C
ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌

ಎಪಿಎಂಸಿ ಸೆಸ್‌ ಇಳಿಕೆಗೆ ಪ್ರಸ್ತಾವ: ಸೋಮಶೇಖರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ (ಎಪಿಎಂಸಿ) ನಡೆಯುವ ವಹಿವಾಟಿನ ಮೇಲೆ ವಿಧಿಸುತ್ತಿರುವ ಸೆಸ್‌ ಅನ್ನು ಇಳಿಕೆ ಮಾಡುವ ಪ್ರಸ್ತಾವವಿದ್ದು, ಜುಲೈ 9ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಶುಕ್ರವಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಏಕರೂಪ ತಂತ್ರಾಂಶ ಅಳವಡಿಕೆಗೆ ಚಾಲನೆ ನೀಡಿ ಮಾತನಾಡಿ, ‘ಎಪಿಎಂಸಿ ಕಾಯ್ದೆ ತಿದ್ದುಪಡಿ ಬಳಿಕ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಮುಕ್ತ ಅವಕಾಶವಿದೆ. ಬೇರೆ ಕಡೆ ಸೆಸ್‌ ಇಲ್ಲ. ಆದ್ದರಿಂದ ಎಪಿಎಂಸಿ ಸೆಸ್‌ ಕಡಿತ ಮಾಡುವಂತೆ ವರ್ತಕರು ಬೇಡಿಕೆ ಇಟ್ಟಿದ್ದಾರೆ’ ಎಂದರು.

ವರ್ಷಕ್ಕೆ ಸುಮಾರು ₹ 600 ಕೋಟಿಗೂ ಹೆಚ್ಚು ಎಪಿಎಂಸಿ ಸೆಸ್‌ ಸಂಗ್ರಹವಾಗುತ್ತಿದೆ. ಸಿಬ್ಬಂದಿ ವೇತನ, ಅಭಿವೃದ್ಧಿ ಕಾಮಗಾರಿ ಮತ್ತು ಸ್ವಚ್ಛತೆ ನಿರ್ವಹಣೆಗೆ ಈ ಹಣವನ್ನೇ ಬಳಸಲಾಗುತ್ತಿದೆ. ಈ ವೆಚ್ಚಗಳಿಗಾಗಿ ವಾರ್ಷಿಕ ಅಗತ್ಯವಿರುವ ಮೊತ್ತದ ಕುರಿತು ವರದಿ ಸಲ್ಲಿಸಲು ಸೂಚಿಸಲಾಗುತ್ತದೆ. ಅದನ್ನು ಪರಿಶೀಲಿಸಿದ ಬಳಿಕ ಸೆಸ್‌ ಇಳಿಕೆ ಪ್ರಮಾಣದ ಕುರಿತು ನಿರ್ಧರಿಸಲಾಗುವುದು ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು