ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಕಿ ವೇತನ, ಉದ್ಯೋಗಕ್ಕೆ ಆಗ್ರಹ

ಬಿಬಿಎಂಪಿ ಕಂಪ್ಯೂಟರ್‌ ಆಪರೇಟರ್ಸ್‌, ಎಂಜಿನಿಯರ್‌ಗಳ ಧರಣಿ
Last Updated 18 ಜೂನ್ 2019, 19:48 IST
ಅಕ್ಷರ ಗಾತ್ರ

ಬೆಂಗಳೂರು: ಬಾಕಿ ವೇತನ ಪಾವತಿ ಹಾಗೂ ಕೆಲಸಕ್ಕೆ ಮರುನೇಮಕ ಮಾಡಿಕೊಳ್ಳುವಂತೆ ಕಾರ್ಮಿಕ ನ್ಯಾಯಾಲಯ ಆದೇಶ ನೀಡಿದ್ದರೂ ಕ್ರಮ ಕೈಗೊಳ್ಳದ ಪಾಲಿಕೆ ನಡೆಯನ್ನು ಖಂಡಿಸಿ ಬಿಬಿಎಂಪಿ ಕಂಪ್ಯೂಟರ್‌ ಆಪರೇಟರ್ಸ್‌ ಮತ್ತು ಐಟಿ ಎಂಜಿನಿಯರ್‌ಗಳು ಯೂನಿಯನ್‌ ಸದಸ್ಯರು ಮಂಗಳವಾರ ಧರಣಿ ನಡೆಸಿದರು.

ಸಂಘದ ಅಧ್ಯಕ್ಷೆ ಬಿ.ಶಾರದಮ್ಮ ಮಾತನಾಡಿ, ‘ಪಾಲಿಕೆಯ ವಿವಿಧ ವಲಯಗಳ ವಾರ್ಡ್‌ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 274 ಡೇಟಾ ಎಂಟ್ರಿ ಆಪರೇಟರ್‌ಗಳನ್ನು (ಡಿಇಒ)2013ರಲ್ಲಿ ಏಕಾಏಕಿ ಕೆಲಸದಿಂದ ಕಿತ್ತು ಹಾಕಲಾಗಿತ್ತು. ಇದನ್ನು ಪ್ರಶ್ನಿಸಿ ನಾವು ಕಾರ್ಮಿಕ ನ್ಯಾಯಾಲಯದ ಮೊರೆ ಹೋದೆವು. ಶೇ 50ರಷ್ಟು ಬಾಕಿ ವೇತನ ಹಾಗೂ ಕೆಲಸಕ್ಕೆ ಮರುನೇಮಕ ಮಾಡಿಕೊಳ್ಳುವಂತೆ 2017ರಲ್ಲಿ ನ್ಯಾಯಾಲಯವು ತೀರ್ಪು ನೀಡಿದೆ. ಆದರೆ, ಇಲ್ಲಿಯವರೆಗೆ ಪಾಲಿಕೆ ಇದರ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ತಿಳಿಸಿದರು.

‘ಪಾಲಿಕೆಗೆ ಈ ಬಗ್ಗೆ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೂ ಯಾವುದೇ ಪರಿಹಾರ ನೀಡದೇ ಮೌನವಾಗಿದೆ. ಕೆಲಸ ಕಳೆದುಕೊಂಡವರ ಕುಟುಂಬಗಳು ಸಂಕಷ್ಟದಲ್ಲಿವೆ. ಕೂಡಲೇ ಬಾಕಿ ವೇತನ ನೀಡಿ ಕೆಲಸಕ್ಕೆ ಮರುನೇಮಕಾತಿ ಮಾಡಿಕೊಳ್ಳಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT