ಶುಕ್ರವಾರ, ಏಪ್ರಿಲ್ 3, 2020
19 °C

ಸಾಗರಮಾಲಾ ಯೋಜನೆ ವಿರೋಧಿಸಿ ಸಮುದ್ರಕ್ಕಿಳಿದು ಪ್ರತಿಭಟನೆ: ಮೂವರು ಅಸ್ವಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಕಾರವಾರ: ಸಾಗರಮಾಲಾ ಯೋಜನೆಯ ಕಾಮಗಾರಿ ವಿರೋಧಿಸಿ ಪ್ರತಿಭಟಿಸುತ್ತಿದ್ದ ಮೂವರು ಮೀನುಗಾರ ಮಹಿಳೆಯರು ಅಸ್ವಸ್ಥಗೊಂಡಿದ್ದಾರೆ. 

ಕಡಲತೀರದಲ್ಲಿ ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದವರು ಸಮುದ್ರಕ್ಕೂ ಇಳಿದು ಹೋರಾಟ ಮುಂದುವರಿಸಿದರು. ಬೆಳಗ್ಗೆ ಒಬ್ಬರು ಹಾಗೂ ಮಧ್ಯಾಹ್ನ ಇಬ್ಬರು ಮಹಿಳೆಯರು ಅಸ್ವಸ್ಥರಾದರು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು.

ಕಾಮಗಾರಿಯ ಸ್ಥಳಕ್ಕೆ ಬೆಳಗ್ಗೆ ನುಗ್ಗಲು ಯತ್ನಿಸಿದ 70ಕ್ಕೂ ಅಧಿಕ ಪ್ರತಿಭಟನಾಕಾರರನ್ನು ಪೊಲೀಸರು ಬೆಳಗ್ಗೆ ವಶಕ್ಕೆ ಪಡೆದಿದ್ದರು. ಅವರನ್ನು ಮಧ್ಯಾಹ್ನ ಬಿಡುಗಡೆ ಮಾಡಿದರು. 

ಸ್ಥಳಕ್ಕೆ ಕಾಂಗ್ರೆಸ್ ಮುಖಂಡ ಸತೀಶ ಸೈಲ್ ಹಾಗೂ ಸ್ಥಳೀಯ ಮುಖಂಡರು ಭೇಟಿ ನೀಡಿ ಪ್ರತಿಭಟನಾಕಾರರ ಜೊತೆ ಚರ್ಚಿಸಿದರು.

ಅಘೋಷಿತ ಬಂದ್ ವಾತಾವರಣ

ಕಾರವಾರದಲ್ಲಿ ಅಘೋಷಿತ ಬಂದ್ ವಾತಾವರಣವಿದೆ. ಮೀನುಗಾರರ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ವರ್ತಕರನ್ನು ಮತ್ತು ಹೋಟೆಲ್ ಉದ್ಯಮಿಗಳನ್ನು ವ್ಯವಹಾರ ಸ್ಥಗಿತಗೊಳಿಸಲು ಮನವಿ ಮಾಡಿದರು. ಅವರ ಕೋರಿಕೆಯನ್ನು ಮನ್ನಿಸಿದ ವರ್ತಕರು ಅಂಗಡಿ, ಹೋಟೆಲ್ ಗಳ ಬಾಗಿಲು ಮುಚ್ಚಿ ಬೆಂಬಲಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು