ಬುಧವಾರ, ಜನವರಿ 22, 2020
25 °C
ಸಾಹಿತಿ ಚಂದ್ರಶೇಖರ ವಸ್ತ್ರದಗೆ ಡಾ.ಡಿ.ಎಸ್‌. ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಸಮ್ಮೇಳನಾಧ್ಯಕ್ಷತೆ: ವಿರೋಧಕ್ಕೆ ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ.ಎಚ್‌.ಎಚ್‌.ವೆಂಕಟೇಶಮೂರ್ತಿ ಅವರನ್ನು ಆಯ್ಕೆ ಮಾಡಿರುವುದಕ್ಕೆ ಸ್ಥಳೀಯವಾಗಿ ವಿರೋಧ ವ್ಯಕ್ತವಾಗಿರುವುದನ್ನು ಸಾಹಿತಿ ಡಾ.ದೊಡ್ಡರಂಗೇಗೌಡ ಖಂಡಿಸಿದರು.

ಸಾಹಿತಿ ಚಂದ್ರಶೇಖರ ವಸ್ತ್ರದ ಅವರ ‘ಅರಿವು ಅಕ್ಷದಾಚೆ’ ಕೃತಿಗೆ ಪ್ರಸಕ್ತ ಸಾಲಿನ ಡಾ.ಡಿ.ಎಸ್‌.ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

‘ಒಂದು ಸೀಮೆಯ ಸಾಹಿತಿ ಇನ್ನೊಂದು ಸೀಮೆಯಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಬಾರದು ಎಂದು ಬೇಲಿ ಹಾಕುವುದು ಸರಿಯಲ್ಲ. ಸ್ಥಳೀಯರೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದರೆ ಆ ಪ್ರಾಂತ್ಯ ಅಭಿವೃದ್ಧಿಯಾಗಲ್ಲ. ಕುಬ್ಜತೆ ಪ್ರದರ್ಶಿಸುವುದು ಬೇಡ, ಸಾಹಿತ್ಯ ಅಕಳಂಕವಾಗಿರಬೇಕು’ ಎಂದು ಅಭಿಪ್ರಾಯಪಟ್ಟರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು