ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷಾ ಕೆಲಸ ಕಡ್ಡಾಯ: ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶ

Last Updated 8 ಮಾರ್ಚ್ 2020, 20:13 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ದ್ವಿತೀಯ ಪಿಯು ಪರೀಕ್ಷಾ ಕಾರ್ಯಗಳನ್ನು ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ.

ವಿಶೇಷ ಜಾಗೃತ ದಳ, ಜಿಲ್ಲಾ, ತಾಲ್ಲೂಕು ಜಾಗೃತ ದಳದ ಸದಸ್ಯರು, ಅಧೀಕ್ಷಕರು, ಮುಖ್ಯ ಅಧೀಕ್ಷಕರಾಗಿ ನೇಮಕಗೊಂಡ ಉಪನ್ಯಾಸಕರನ್ನು ಹೊರತುಪಡಿಸಿ ಉಳಿದವರು ತಮ್ಮ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯುವ ಕೇಂದ್ರಗಳ ಹೊರತಾಗಿ ಇತರ ಕೇಂದ್ರಗಳಲ್ಲಿ ಕೊಠಡಿ ಮೇಲ್ವಿಚಾರಕರಾಗಿ ಕೆಲಸ ನಿರ್ವಹಿಸಬೇಕು ಎಂಬ ಕಟ್ಟುನಿಟ್ಟಿನ ಸೂಚನೆಯನ್ನು ಆಯಾ ಜಿಲ್ಲಾ ಉಪನಿರ್ದೇಶಕರು ನೀಡಿದ್ದಾರೆ.

‘ಕೆಲಸ ಇಲ್ಲದ ಉಪನ್ಯಾಸಕರು ತಮ್ಮ ಕರ್ತವ್ಯ ಮರೆತಿದ್ದಾರೆ, ಇವರ ಸ್ಥಾನದಲ್ಲಿ ಅನಿವಾರ್ಯವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರನ್ನು ನಿಯೋಜಿಸುವ ಅನಿವಾರ್ಯತೆ ಬಂದಿದೆ. ಇದಕ್ಕಾಗಿಯೇ ಉಪನ್ಯಾಸಕರಿಗೆ ಈ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ’ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT