ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

Last Updated 21 ಫೆಬ್ರುವರಿ 2019, 20:27 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಒದಗಿಸಿದೆ.

ಮಾರ್ಚ್ 1ರಿಂದ 18ರವರೆಗೆ ಈ ಸೌಲಭ್ಯ ಜಾರಿಯಲ್ಲಿರುತ್ತದೆ. ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ (ಹಾಲ್‌ ಟಿಕೆಟ್‌) ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು. ನಿಗಮದ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಫ್ಲೈ ಬಸ್‌ ವಿಸ್ತರಣೆ; ಸಲಹೆ ಆಹ್ವಾನ

ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುಂದಾಪುರ, ಮೈಸೂರು, ಮಡಿಕೇರಿಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಫ್ಲೈ ಬಸ್‌ಗಳನ್ನು ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಅನಂತಪುರ ಮತ್ತು ಕಡಪಕ್ಕೆ ವಿಸ್ತರಿಸಲು ಕೆಎಸ್‌ಆರ್‌ಟಿಸಿ ಮುಂದಾಗಿದೆ. ಅದಕ್ಕಾಗಿ ಬಸ್‌ಗಳ ಸಂಚಾರ ಸಮಯ ನಿಗದಿಪಡಿಸುವ ಬಗ್ಗೆ ಪ್ರಯಾಣಿಕರಿಂದ ಸಲಹೆ ಆಹ್ವಾನಿಸಲಾಗಿದೆ. ಸಲಹೆಗಳನ್ನು pro@ksrtc.org ಅಥವಾ ನಿಗಮದ ಫೇಸ್‌ಬುಕ್‌ ಖಾತೆ ಮೂಲಕವೂ ನೀಡಬಹುದು ಎಂದು ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT