ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಉಪನ್ಯಾಸಕರ ನೇಮಕಾತಿಗೆ ನ.29ರಿಂದ ಪರೀಕ್ಷೆ

Last Updated 19 ಅಕ್ಟೋಬರ್ 2018, 19:41 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳ ಭರ್ತಿಗೆ ನ.29ರಂದು ಸ್ಪರ್ಧಾತ್ಮಕ ಪರೀಕ್ಷೆ ಆರಂಭವಾಗಲಿದ್ದು, ಡಿ.8ಕ್ಕೆ ಮುಗಿಯಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪರ್ಧಾತ್ಮಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ. ಪ್ರತಿದಿನ ಎರಡು ನಿರ್ದಿಷ್ಟ ಪತ್ರಿಕೆಗಳ ಪರೀಕ್ಷೆ ನಡೆಯಲಿದೆ. ಕ್ರಮವಾಗಿ ಬೆಳಿಗ್ಗೆ 9.30ರಿಂದ 12.30 ಮತ್ತು ಮಧ್ಯಾಹ್ನ 2 ರಿಂದ 5 ಗಂಟೆವರೆಗೆ ಸಮಯ ನಿಗದಿ ಮಾಡಲಾಗಿದೆ.

ಸ್ನಾತಕೋತ್ತರ ಪದವಿಯಲ್ಲಿ ಶೇ50ರಷ್ಟು ಅಂಕ ಗಳಿಸಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1ರ ಅಭ್ಯರ್ಥಿಗಳು ಸಹ ಈ ನೇಮಕಾತಿಗೆ ಅರ್ಹರಾಗುವಂತೆ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ ಮಾಡಲು ಸರ್ಕಾರ ಈ ಹಿಂದೆ ಶಿಕ್ಷಣ ಇಲಾಖೆಗೆ ಸೂಚಿಸಿತ್ತು.

ಅಲ್ಲದೆ, ತಿದ್ದುಪಡಿ ನಿಯಮ ಜಾರಿಯಾಗುವವರೆಗೂ ನೇಮಕಾತಿ ಪ್ರಕ್ರಿಯೆ ಮುಂದೂಡಲು ಸೂಚನೆ ನೀಡಿತ್ತು. ಹಾಗಾಗಿ ಅ.11ರಿಂದ 23ರ ವರೆಗೆ ನಡೆಯಬೇಕಿದ್ದ ಈ ಪರೀಕ್ಷೆಯನ್ನು ಮುಂದೂಡಲಾಗಿತ್ತು.

ಆದರೆ, ನೇಮಕಾತಿಯ ಅಧಿಸೂಚನೆಯನ್ನು ಒಮ್ಮೆ ಹೊರಡಿಸಿದ ಬಳಿಕ, ನಿಯಮಗಳನ್ನು ತಿದ್ದುಪಡಿ ಮಾಡಲು ಅವಕಾಶ ಇಲ್ಲ ಎಂದು ಕಾನೂನು ತಜ್ಞರು ಸಲಹೆ ನೀಡಿದ್ದರಿಂದ, ಪ್ರಕ್ರಿಯೆ ಮುಂದುವರಿಸಲು ಸರ್ಕಾರವು ಪ್ರಾಧಿಕಾರಕ್ಕೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT