ಬೇಡಿಕೆ ಈಡೇರಿಕೆಗೆ ಒತ್ತಾಯ: ಮೌಲ್ಯಮಾಪನ ಬಹಿಷ್ಕಾರಕ್ಕೆ ಉಪನ್ಯಾಸಕರು ನಿರ್ಣಯ

ಶನಿವಾರ, ಮಾರ್ಚ್ 23, 2019
28 °C

ಬೇಡಿಕೆ ಈಡೇರಿಕೆಗೆ ಒತ್ತಾಯ: ಮೌಲ್ಯಮಾಪನ ಬಹಿಷ್ಕಾರಕ್ಕೆ ಉಪನ್ಯಾಸಕರು ನಿರ್ಣಯ

Published:
Updated:

ಬೆಂಗಳೂರು: ‘ದ್ವಿತೀಯ ಪಿಯು ಉತ್ತರ ಪತ್ರಿಕೆ ಮೌಲ್ಯ ಮಾಪನಕ್ಕೆ ಸಾಮೂಹಿಕ ಬಹಿಷ್ಕಾರ ಮಾಡಲಾಗುವುದು’ ಎಂದು ಸರ್ಕಾರಿ ಪದವಿ ಪೂರ್ವ ಉಪನ್ಯಾಸಕರು ನಿರ್ಣಯ ಮಾಡಿದ್ದಾರೆ.

ಪದವಿಪೂರ್ವ ಕಾಲೇಜುಗಳನ್ನು ಮೇ ಮೊದಲ ವಾರದಿಂದ ಆರಂಭಿಸುವುದಕ್ಕೆ ವಿರೋಧ ವ್ಯಕ್ತಪಡಿಸಿ ಈ ಪ್ರತಿಭಟನೆಯನ್ನು ಉಪನ್ಯಾಸಕರು ಹಮ್ಮಿಕೊಂಡಿದ್ದಾರೆ. ಇದಕ್ಕೆ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇ ಗೌಡ ಮತ್ತು ಬೋಜೇಗೌಡ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮಾರ್ಚ್ 21ರಿಂದ ಮೌಲ್ಯಮಾಪನ ಶುರುವಾಗಲಿದೆ. ಮಾರ್ಚ್ 20ರೊಳಗೆ ನಮ್ಮ ಬೇಡಿಕೆ ಈಡೇರದಿದ್ದರೆ, ಮೌಲ್ಯಮಾಪನವನ್ನು ಬಹಿಷ್ಕರಿಸಿ ಅಹೋರಾತ್ರಿ ಹೋರಾಟ ನಡೆಸುತ್ತೇವೆ ಎಂದು ಪದವಿ ಪೂರ್ವ ಶಿಕ್ಷಕರು ತಿಳಿಸಿದ್ದಾರೆ.

ಇದೇ 1ರಂದು ದ್ವಿತೀಯ ಪಿಯು ಪರೀಕ್ಷೆ ಪ್ರಾರಂಭಗೊಂಡಿದ್ದು, 18ಕ್ಕೆ ಪೂರ್ಣಗೊಳ್ಳಲಿದೆ. ಈ ಬಾರಿ ಒಟ್ಟು 6,73,606 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 3

  Happy
 • 1

  Amused
 • 1

  Sad
 • 0

  Frustrated
 • 3

  Angry

Comments:

0 comments

Write the first review for this !