ಗುರುವಾರ , ನವೆಂಬರ್ 21, 2019
20 °C

ದ್ವಿತೀಯ ಪಿಯು: ಶುಲ್ಕ ಪಾವತಿ ದಿನಾಂಕ ವಿಸ್ತರಣೆ

Published:
Updated:

ಬೆಂಗಳೂರು: ಮುಂದಿನ ಮಾರ್ಚ್‌ ತಿಂಗಳಲ್ಲಿ ನಡೆಯುವ ದ್ವಿತೀಯ ಪಿಯು ಪರೀಕ್ಷೆಗೆ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ನಿಗದಿಪಡಿಸಿದ್ದ ದಿನಾಂಕವನ್ನು ವಿಸ್ತರಿಸಲಾಗಿದೆ.

ಇದೇ 16ರೊಳಗೆ ವಿದ್ಯಾರ್ಥಿಗಳು ನಿಗದಿತ ದಂಡ ಶುಲ್ಕ ಪಾವತಿಸಬೇಕು ಹಾಗೂ ಕಾಲೇಜಿನವರು ಆನ್‌ಲೈನ್‌ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡಬೇಕು.

18ರೊಳಗೆ ಕಾಲೇಜಿನವರು ಖಜಾನೆಗೆ ಹಣ ಸಂದಾಯ ಮಾಡಬೇಕು, 20ರೊಳಗೆ ಪರೀಕ್ಷಾ ಅರ್ಜಿಗಳನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ತಲುಪಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)