ಬೆಂಗಳೂರು: ಪ್ರಥಮ ಪಿಯು ಪರೀಕ್ಷೆ ಇದೇ 10ರಿಂದ 25ರವರೆಗೆ ನಡೆಯಲಿದ್ದು, ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಉಪನ್ಯಾಸಕರು ಕಪ್ಪು ಪಟ್ಟಿ ಧರಿಸಿ ಪರೀಕ್ಷಾ ಕಾರ್ಯದಲ್ಲಿ ತೊಡಗಲಿದ್ದಾರೆ.

‘ಇದು ನಮ್ಮ ಮೂರನೇ ಹಂತದ ಪ್ರತಿಭಟನೆ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ಸಹ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಗುವುದು, ಸರ್ಕಾರ ಎಚ್ಚೆತ್ತುಕೊಂಡು ಬೇಡಿಕೆ ಈಡೇರಿಸಬೇಕು, ಮೌಲ್ಯಮಾಪನ ಬಹಿಷ್ಕಾರದ ತನಕವೂ ಪರಿಸ್ಥಿತಿ ಹೋಗುವುದು ಬೇಡ ಎಂಬುದೇ ನಮ್ಮ ಆಶಯ’ ಎಂದು ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.