ಶುಕ್ರವಾರ, ಜನವರಿ 22, 2021
28 °C

2018ರಲ್ಲಿ ಗೋಕಾಕ ಬಿಜೆಪಿ ಅಭ್ಯರ್ಥಿಯಾಗಿದ್ದ ಪೂಜಾರಿ ಜೆಡಿಎಸ್‌ನಿಂದ ಕಣಕ್ಕೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಗೋಕಾಕ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ವಂಚಿತರಾಗಿರುವ ಮತ್ತು ಕಾಂಗ್ರೆಸ್‌ ಟಿಕೆಟ್‌ಗೂ ಪ್ರಯತ್ನಿಸಿದ್ದ ಅಶೋಕ ಪೂಜಾರಿ, ಕೊನೆ ಕ್ಷಣದಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸುತ್ತಾರೆ ಎನ್ನಲಾಗುತ್ತಿದೆ. ಆದರೆ, ಇದನ್ನು ಪೂಜಾರಿ ಖಚಿತಪಡಿಸಿಲ್ಲ.

ಸೋಮವಾರ (ನ. 18ರಂದು) ಜೆಡಿಎಸ್‌ ಮುಖಂಡ ಎಚ್‌.ಡಿ. ಕುಮಾರಸ್ವಾಮಿ ಬಂದು ನಾಮಪತ್ರ ಹಾಕಿಸುತ್ತಾರೆ ಎಂದೂ ಹೇಳಲಾಗುತ್ತಿದೆ. ಇದನ್ನು ಜೆಡಿಎಸ್‌ನ ಕೆಲವು ಕಾರ್ಯಕರ್ತರು ಸಾಮಾಜಿಕ ಮಾಧ್ಯಮದಲ್ಲೂ ಹಾಕಿಕೊಂಡಿದ್ದಾರೆ.

‘ಇನ್ನೂ ಏನನ್ನೂ ನಿರ್ಧಾರ ಮಾಡಿಲ್ಲ’ ಎಂದು ಪೂಜಾರಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

2008ರ ಚುನಾವಣೆಯಲ್ಲಿ ಅವರು ಜೆಡಿಎಸ್‌ ಅಭ್ಯರ್ಥಿಯಾಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು