ಶುಕ್ರವಾರ, ಸೆಪ್ಟೆಂಬರ್ 17, 2021
24 °C

ಪಿಡಬ್ಲ್ಯೂಡಿ ಹಗರಣ: ಸಮಗ್ರ ತನಿಖೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಲೋಕೋಪಯೋಗಿ ಇಲಾಖೆಯಲ್ಲಿ ಕಾಮಗಾರಿ ನಡೆಸುವ ಮುನ್ನವೇ ಗುತ್ತಿಗೆದಾರರಿಗೆ ₹1,344 ಕೋಟಿ ಪಾವತಿಸಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಒತ್ತಾಯಿಸಿದರು.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಲಾಖೆಯಲ್ಲಿ ತುಂಡು ಗುತ್ತಿಗೆಯ ಜತೆಗೆ ಕಳ್ಳ ಬಿಲ್‌, ಸುಳ್ಳು ಲೆಕ್ಕವನ್ನೂ ಬರೆಯಲಾಗಿದೆ. ಇದು ಇಂದು ನಿನ್ನೆಯದ್ದಲ್ಲ, ಪಿತ್ರಾರ್ಜಿತವಾಗಿ ಬಂದಿದೆ. ಸಮಗ್ರ ತನಿಖೆಯಾದರೆ ಯಾರು ಕಂಬಿ ಎಣಿಸಬೇಕು ಎಂಬುದು ನಿರ್ಧಾರವಾಗುತ್ತದೆ’ ಎಂದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು