ಗುರುವಾರ , ಅಕ್ಟೋಬರ್ 6, 2022
26 °C

ಕತಾರ್‌: ಹೆಚ್ಚುವರಿ ವಿಮಾನಕ್ಕೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಲಾಕ್‌ಡೌನ್ ಕಾರಣದಿಂದ ಕತಾರ್‌ನಲ್ಲಿ ಕನ್ನಡಿಗರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಬೆಂಗಳೂರು ಹಾಗೂ ಮಂಗಳೂರಿಗೆ ಹೆಚ್ಚುವರಿ ವಿಮಾನಯಾನ ಸೌಲಭ್ಯ ಒದಗಿಸಬೇಕು’ ಎಂದು ಕತಾರ್‌ನಲ್ಲಿರುವ ಐಸಿಬಿಎಫ್ (ಭಾರತೀಯ ಸಮುದಾಯ ಹಿತೈಷಿ ಸಮಿತಿ) ಸರ್ಕಾರವನ್ನು ಆಗ್ರಹಿಸಿದೆ.

‘ಕೊರೊನಾ ಕಾರಣದಿಂದ ವಿದೇಶದಲ್ಲಿರುವ ಕನ್ನಡಿಗರಿಗೆ ಸರ್ಕಾರ ಸ್ಪಂದಿಸಿದೆ. ಅವರನ್ನು ತಾಯ್ನಾಡಿಗೆ ಕರೆಕೊಂಡು ಬರಲು ವಿಮಾನಯಾನ ಸೇವೆ ಕಲ್ಪಿಸಿದೆ. ದೋಹಾದಿಂದ ಬೆಂಗಳೂರಿಗೆ ಪ್ರತ್ಯೇಕ ವಿಮಾನ ನಿಗದಿಪಡಿಸಿದೆ. ಆದರೆ ಕತಾರ್‌ನಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಬಹುತೇಕ ಕನ್ನಡಿಗರು ಕೆಲಸ ಕಳೆದುಕೊಂಡು, ಜೀವನ ನಡೆಸಲು ಪರದಾಡುತ್ತಿದ್ದಾರೆ’ ಎಂದು ಸಮಿತಿಯ ಪ್ರತಿನಿಧಿ ಸುಬ್ರಮಣ್ಯ ಹೆಬ್ಬಾಗಿಲು ಮನವಿಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು