ಬೆಂಗಳೂರು: ‘ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳ ಗುಣಾತ್ಮಕ ಶಿಕ್ಷಣ, ಉತ್ತಮ ನಿರ್ವಹಣೆ, ಕಟ್ಟಡಗಳ ನಿರ್ಮಾಣ ಸಹಿತ ಇತರ ಕಾರ್ಯಚಟುವಟಿಕೆಗಳಿಗೆ ಪ್ರಸಕ್ತ ಸಾಲಿನಲ್ಲಿ ₹ 1,365 ಕೋಟಿ ವೆಚ್ಚದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ’ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ತಿಳಿಸಿದರು.

ಇಲ್ಲಿ ಶುಕ್ರವಾರ ನಡೆದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 74ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ, ಶೈಕ್ಷಣಿಕ ಅಭಿವೃದ್ಧಿಗಾಗಿ ಶಿಕ್ಷಣ ತಜ್ಞರಾದ ಡಾ.ಗುರುರಾಜ ಕರಜಗಿ ಅವರನ್ನು ಶೈಕ್ಷಣಿಕ ಸಲಹೆಗಾರರನ್ನಾಗಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕರಾದ ಬೆಳ್ಳಿಶೆಟ್ಟಿ ಅವರನ್ನು ಸಮಾಲೋಚಕರನ್ನಾಗಿ ನೇಮಿಸಲಾಗುವುದು’ ಎಂದರು.

‘ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಮಳೂರು, ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಬೆಳಗಲಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕುಂದಾಣದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಮಾಚಿಹಳ್ಳಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿಶಾಲೆಯನ್ನು ಕ್ರೀಡಾ ವಸತಿ ಶಾಲೆಯನ್ನಾಗಿ ಪರಿವರ್ತಿಸಲಾಗುವುದು’ ಎಂದರು.

‘12 ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 6ರಿಂದ 12ನೇ ತರಗತಿಯವರೆಗೆ ಇಂಗ್ಲಿಷ್ ಮಾಧ್ಯಮದಲ್ಲಿ ಬೋಧಿಸಲಾಗುತ್ತಿದ್ದು, ಸಿಬಿಎಸ್ಇ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಲು ಯೋಜಿಸಲಾಗುತ್ತಿದೆ’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.