ಬುಧವಾರ, ನವೆಂಬರ್ 20, 2019
23 °C

ಹೋಟೆಲ್‌ ಸಿಬ್ಬಂದಿಗೆ ಬುಲಾವ್?

Published:
Updated:

ಹುಬ್ಬಳ್ಳಿ: ಇಲ್ಲಿ ಇತ್ತೀಚೆಗೆ ನಡೆದ ಬಿಜೆಪಿ ಆಂತರಿಕ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಾತನಾಡಿದ್ದನ್ನು ಆಡಿಯೊ ರೆಕಾರ್ಡಿಂಗ್‌ ಮಾಡಿದ್ದಕ್ಕೆ ಸಂಬಂಧಿಸಿದಂತೆ ಹೋಟೆಲ್‌ ಸಿಬ್ಬಂದಿಯೊಬ್ಬರನ್ನು ವಿಚಾರಣೆಗೆ ಬೆಂಗಳೂರಿಗೆ ಬರುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

ಆಡಿಯೊ ರೆಕಾರ್ಡಿಂಗ್‌ ಮಾಡಿದ ಮೂಲದ ಪತ್ತೆಗೆ ಮಂಗಳವಾರ ಬೆಂಗಳೂರಿನಿಂದ ಬಂದಿದ್ದ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಹೋಟೆಲ್‌ಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆ ವೇಳೆ ಹೋಟೆಲ್‌ ಮ್ಯಾನೇಜರ್‌ಗೆ ಬೆಂಗಳೂರಿಗೆ ಬರುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಸೋಮವಾರವೂ ಗುಪ್ತಚರ ದಳದ ಅಧಿಕಾರಿಗಳೂ ಹೋಟೆಲ್‌ಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದ್ದರು.

ಪ್ರತಿಕ್ರಿಯಿಸಿ (+)