ಜಾಲ‍ಪ್ಪ ವಿದ್ಯಾರ್ಥಿ ವೇತನಕ್ಕೆ ಅರ್ಜಿ

7

ಜಾಲ‍ಪ್ಪ ವಿದ್ಯಾರ್ಥಿ ವೇತನಕ್ಕೆ ಅರ್ಜಿ

Published:
Updated:

ಬೆಂಗಳೂರು: ಆರ್.ಎಲ್. ವಿಜಯಲಕ್ಷ್ಮಿ ಜಾಲಪ್ಪ ಎಜುಕೇಶನ್ ಟ್ರಸ್ಟ್ ವತಿಯಿಂದ ಆರ್ಯ ಈಡಿಗ ಸಮುದಾಯದ ಪಿಯುಸಿ, ಡಿಪ್ಲೊಮಾ, ಐಟಿಐ, ಎಂಜಿನಿಯರಿಂಗ್, ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಮೈಸೂರು, ಚಾಮರಾಜನಗರ, ಹಾಸನ, ಚಿತ್ರದುರ್ಗ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಯಲ್ಲಿರುವ ಆರ್ಯ–ಈಡಿಗ ಸಮುದಾಯಕ್ಕೆ ಸೇರಿದ ಅತಿ ಸಣ್ಣ ರೈತ ಕುಟುಂಬಗಳ ಹಾಗೂ ಕೂಲಿ ಕಾರ್ಮಿಕರ ಮಕ್ಕಳು ಅರ್ಜಿ ಸಲ್ಲಿಸಬಹುದು.

ಹಿಂದಿನ ವರ್ಷಗಳಲ್ಲಿ ವಿದ್ಯಾರ್ಥಿ ವೇತನ ಪಡೆದವರು ಕಳೆದ ಸಾಲಿಗಿಂತ ಹೆಚ್ಚು ಅಂಕಗಳನ್ನು ಹೊಂದಿರಬೇಕು ಹಾಗೂ ಹೊಸದಾಗಿ ಅರ್ಜಿ ಸಲ್ಲಿಸುವವರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.

ಸೆಪ್ಟೆಂಬರ್‌ 19ರೊಳಗೆ ಆನ್‌ಲೈನ್‌ ಅಥವಾ ಅಂಚೆ ಮೂಲಕ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬೇಕು. ವೆಬ್‌ಸೈಟ್‌ : www.jalappaedufoundation.org 

ವಿಳಾಸ: ವಿಜಯಲಕ್ಷ್ಮಿ ಆರ್.ಎಲ್.ಜಾಲಪ್ಪ ಎಜುಕೇಶನ್ ಫೌಂಡೇಶನ್, ನಂ.126, ‘ಸಿಲ್ವರ್‌ಸ್ಟಾರ್‌ ಹೋಟೆಲ್‌’, ಕೆಳಮಹಡಿ, 6ನೇ ಅಡ್ಡ ರಸ್ತೆ, ಗಾಂಧಿನಗರ, ಬೆಂಗಳೂರು. ಹೆಚ್ಚಿನ ಮಾಹಿತಿಗೆ: 9900355995.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !