ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಫೇಲ್‌ ಹಗರಣ ತನಿಖೆಯಾಗಲಿ: ಸಂತೋಷ್ ಹೆಗ್ಡೆ

Last Updated 21 ಮಾರ್ಚ್ 2019, 19:27 IST
ಅಕ್ಷರ ಗಾತ್ರ

ಹಾಸನ: ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸುವ ಹಕ್ಕನ್ನು ಕಾಂಗ್ರೆಸ್ ಕಳೆದುಕೊಂಡಿದೆ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಗುರುವಾರ ಹೇಳಿದರು.

ಇಲ್ಲಿಯ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ‘ಸ್ವಚ್ಛ ಆಡಳಿತ ನೀಡುವ ಭರವಸೆ ನೀಡಿದ್ದ ಎನ್‍ಡಿಎ ಸರ್ಕಾರಕ್ಕೆ ಭ್ರಷ್ಟಾಚಾರದ ಕಳಂಕ ತಗುಲಿದೆ. ಸುಮಾರು ₹ 30 ಸಾವಿರ ಕೋಟಿ ಅವ್ಯವಹಾರವಾಗಿದೆ ಎಂಬ ಆರೋಪ ಕೇಳಿಬಂದಿದ್ದು, ನ್ಯಾಯಾಲಯ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಆದರೆ, 40 ವರ್ಷದಿಂದ ಭ್ರಷ್ಟಾಚಾರದಲ್ಲೇ ಮುಳುಗಿರುವ ಕಾಂಗ್ರೆಸ್‍ಗೆ ಈ ಕುರಿತು ಮಾತನಾಡುವ ಹಕ್ಕಿಲ್ಲ’ ಎಂದರು.

‘ಯುದ್ಧ ವಿಮಾನ ತಯಾರಿಸುವುದನ್ನು ಹಿಂದುಸ್ತಾನ್‌ ಏರೊನಾಟಿಕ್ಸ್‌ ಲಿಮಿಟೆಡ್‌ಗೆ (ಎಚ್ಎಎಲ್‌) ನೀಡಬೇಕೆಂಬುದನ್ನು ಒಪ್ಪುವುದಿಲ್ಲ. ಹಾಗೆಯೇ ರಿಲಯನ್ಸ್‌ಗೆ ಕೊಟ್ಟಿರುವುದು ಸರಿಯಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT