ರಫೇಲ್ ಹಗರಣ ಜಂಟಿ ಸದನ ಸಮಿತಿಗೆ ನೀಡಲು ಬಿಜೆಪಿಗೆ ಹೆದರಿಕೆ ಏಕೆ: ಸಿದ್ದರಾಮಯ್ಯ

7

ರಫೇಲ್ ಹಗರಣ ಜಂಟಿ ಸದನ ಸಮಿತಿಗೆ ನೀಡಲು ಬಿಜೆಪಿಗೆ ಹೆದರಿಕೆ ಏಕೆ: ಸಿದ್ದರಾಮಯ್ಯ

Published:
Updated:

ಹುಬ್ಬಳ್ಳಿ: 'ರಫೇಲ್ ಯುದ್ಧ ವಿಮಾನ ಖರೀದಿ ಹಗರಣ ಸಂಸತ್ತಿನಲ್ಲಿ ಚರ್ಚೆಯಾಗಲಿ ಎಂದು ‌ಜಂಟಿ ಸದನ ಸಮಿತಿ ರಚನೆಗೆ ಆಗ್ರಹಿಸಲಾಗುತ್ತಿದೆ' ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ರಫೇಲ್ ಹಗರಣವನ್ನು ಸಿಬಿಐ ತನಿಖೆಗೆ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ರಾಷ್ಟ್ರದ ಎಲ್ಲ ಜನರನ್ನು ಪ್ರತಿನಿಧಿಸುವ ಸಂಸತ್ತಿನಲ್ಲಿ ಈ ಬಗ್ಗೆ ಚರ್ಚೆಯಾಗಲಿ ಎಂಬುದು ನಮ್ಮ ಬೇಡಿಕೆ. ಆದರೆ ಬಿಜೆಪಿಯವರು ಹೆದರುತ್ತಿದ್ದಾರೆ' ಎಂದರು.

'ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸುತ್ತಿರುವ ಬಿಜೆಪಿಗೆ ಸಂವಿಧಾನ, ನ್ಯಾಯಾಲಯ ಹಾಗೂ ಕಾನೂನಿನ ಬಗ್ಗೆ ಗೌರವ ಇಲ್ಲ. ಸುಪ್ರೀಂಕೋರ್ಟ್ ತೀರ್ಪಿನ ನಂತರ ರಾಮ ಮಂದಿರ ನಿರ್ಮಾಣ ಎಂದು ಪ್ರಧಾನಿ ಹೇಳುತ್ತಾರೆ, ಆದರೆ ಶಬರಿಮಲೆ ವಿಷಯದಲ್ಲಿ ಸುಪ್ರೀಂ ಕೋರ್ಟ್ ವಿರುದ್ಧ ಬಿಜೆಪಿ ಮಾತನಾಡುತ್ತಿದೆ' ಎಂದರು.

'ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ಮಾಡಿಕೊಳ್ಳುವ ಕುರಿತು, ಈ ತಿಂಗಳ ಅಂತ್ಯದೊಳಗೆ ಜೆಡಿಎಸ್ ಜೊತೆ ಸಭೆ ನಡೆಸಲಾಗುವುದು. ಕಾಂಗ್ರೆಸ್ ನಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ, ನಾನೂ ಸೇರಿದಂತೆ ಯಾರ ಪ್ರಭಾವವೂ ನಡೆಯುವುದಿಲ್ಲ' ಎಂದು ಹೇಳಿದರು.

ಶಾಸಕ ರಮೇಶ ಜಾರಕಿಹೊಳಿ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ, ಸಿಗ್ತಾರೆ ಎಲ್ಲಿ ಹೋಗ್ತಾರೆ ಎಂದು ಅವರು ಹೇಳಿದರು.

ಬರಹ ಇಷ್ಟವಾಯಿತೆ?

 • 7

  Happy
 • 0

  Amused
 • 0

  Sad
 • 1

  Frustrated
 • 1

  Angry

Comments:

0 comments

Write the first review for this !