‘ರಾಘವೇಂದ್ರ ಬಿಜೆಪಿ ಅಭ್ಯರ್ಥಿ’

7
ಬಿಜೆಪಿ ಮುಖಂಡರ ಜತೆ ಚರ್ಚಿಸಿ 5 ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ: ಯಡಿಯೂರಪ್ಪ

‘ರಾಘವೇಂದ್ರ ಬಿಜೆಪಿ ಅಭ್ಯರ್ಥಿ’

Published:
Updated:
Deccan Herald

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಅಭ್ಯರ್ಥಿಯಾಗಿ ಮಾಜಿ ಶಾಸಕ  ಬಿ.ವೈ.ರಾಘವೇಂದ್ರ ಅವರನ್ನು ಆಯ್ಕೆ ಮಾಡಲಾಯಿತು. 

ಬಿಜೆಪಿ ಕಚೇರಿಯಲ್ಲಿ ಭಾನುವಾರ ಲೋಕಸಭೆ ಉಪ ಚುನಾವಣೆಗೆ ಸಂಬಂಧಿಸಿದಂತೆ ನಡೆದ ಮುಖಂಡರ ಸಭೆಯಲ್ಲಿ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಬಿ.ವೈ.ರಾಘವೇಂದ್ರ ಹೆಸರನ್ನು ಘೋಷಣೆ ಮಾಡಿದರು.

ಅಭ್ಯರ್ಥಿ ವಿಚಾರವಾಗಿ ಚರ್ಚಿಸಿ ರಾಘವೇಂದ್ರ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಯಿತು. ಈ ಹಿಂದೆ ಲೋಕಸಭೆ ಅಭ್ಯರ್ಥಿಗಳ ವಿಚಾರವಾಗಿ ದತ್ತಾತ್ರಿ, ಚನ್ನಬಸಪ್ಪ ಇತರರ ಹೆಸರನ್ನು ಮುಂದೆ ಬಿಟ್ಟಿದ್ದ ಈಶ್ವರಪ್ಪ ಅವರು ಭಾನುವಾರ ಯಾವುದೇ ತಕರಾರು ಇಲ್ಲದೇ ರಾಘವೇಂದ್ರ ಅವರ ಹೆಸರನ್ನು ಅಂತಿಮಗೊಳಿಸಿದರು.

ನಂತರ ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ‘ಉಪಚುನಾವಣೆ ಗೆಲ್ಲುವ ಮೂಲಕ ಮುಂಬರುವ ಸಾರ್ವತ್ರಿಕ ಚುನಾವಣೆಯನ್ನೂ ಬಿಜೆಪಿ ಗೆಲ್ಲಬೇಕಿದೆ. ಹಾಗಾಗಿ ಉಪಚುನಾವಣೆಯನ್ನು ಗಂಭೀರವಾಗಿ ಸ್ವೀಕರಿಸಬೇಕಿದೆ. ಅ.15ರಂದು ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಸಲಿದ್ದಾರೆ’ ಎಂದರು.

ಶೀಘ್ರದಲ್ಲೇ ಉಳಿದ ಅಭ್ಯರ್ಥಿಗಳ ಹೆಸರು ಅಂತಿಮ: ಶೀಘ್ರದಲ್ಲೇ ಮಂಡ್ಯ, ಬಳ್ಳಾರಿ ಲೋಕಸಭಾ ಅಭ್ಯರ್ಥಿಗಳನ್ನು ಹಾಗೂ ಉಳಿದ ವಿಧಾನಸಭೆ ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ಬೆಂಗಳೂರಿನಲ್ಲಿ ಪಕ್ಷದ ಕೋರ್ ಕಮಿಟಿ ಸಭೆ ನಡೆಸಿದ ನಂತರ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದರು.

ಸಂಪುಟ ವಿಸ್ತರಣೆ ನಿಧಾನ: ಬಿ.ಸಿ.ಪಾಟೀಲ ಅಸಮಾಧಾನ

ಹಿರೇಕೆರೂರ: ’ಸಚಿವ ಸಂಪುಟ ವಿಸ್ತರಣೆ ಮುಂದೂಡುತ್ತಿರುವುದು ಚುನಾಯಿತ ಪ್ರತಿನಿಧಿಗಳಿಗೆ ಮಾಡುವ ಅವಮಾನ, ಪ್ರಜಾಪ್ರಭುತ್ವದ ಕೊಲೆ’ ಎಂದು ಶಾಸಕ ಬಿ.ಸಿ.ಪಾಟೀಲ ಟ್ವೀಟ್ ಮೂಲಕ ಭಾನುವಾರ ಬೆಳಿಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

‘ಉತ್ತರ ಕರ್ನಾಟಕದಿಂದ 16 ಮಂದಿ ಲಿಂಗಾಯತ ಶಾಸಕರು ಆಯ್ಕೆಯಾಗಿದ್ದೇವೆ. ಒಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗಿದೆ. ಅವಿಭಜಿತ ಧಾರವಾಡ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ಕಾಂಗ್ರೆಸ್‌ ಶಾಸಕ ನಾನಾಗಿದ್ದೇನೆ. ಸಾದು ಲಿಂಗಾಯತರಲ್ಲಿ ಒಬ್ಬರಿಗೂ ಸಚಿವ ಸ್ಥಾನ ನೀಡಿಲ್ಲ. ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಿಗೆ ಅನ್ಯಾಯವಾಗುತ್ತಿದೆ’ ಎಂದು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !