ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಕಲಬುರ್ಗಿ, ಬೆಂಗಳೂರಿನಲ್ಲಿ ರಾಹುಲ್ ಕಾರ್ಯಕ್ರಮ

Last Updated 17 ಮಾರ್ಚ್ 2019, 20:16 IST
ಅಕ್ಷರ ಗಾತ್ರ

ಕಲಬುರ್ಗಿ/ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ರಾಜ್ಯಕ್ಕೆ ಬರಲಿದ್ದು, ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಕಲಬುರ್ಗಿಯಲ್ಲಿ ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ‘ಕಾಂಗ್ರೆಸ್‌ ಪರಿವರ್ತನಾ ರ‍್ಯಾಲಿ’ಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅದಾದ ಬಳಿಕ, ಬೆಂಗಳೂರಿನ ಮಾನ್ಯತಾ ಟೆಕ್‌ ಪಾರ್ಕ್‌ ನಡೆಯಲಿರುವ ಸಂವಾದದಲ್ಲಿ ಭಾಗಿಯಾಗಲಿದ್ದಾರೆ.

ಶಾಣಪ್ಪ ಮಗ ಸೇರ್ಪಡೆ: ‘ರಾಹುಲ್‌ ಗಾಂಧಿ ಸಮ್ಮುಖದಲ್ಲಿ ನನ್ನ ಮಗ ವಿನೋದ್‌ ಹಾಗೂ ಬೆಂಬಲಿಗರು ಕಾಂಗ್ರೆಸ್‌ ಸೇರಲಿದ್ದಾರೆ. ಆದರೆ, ನಾನು ಕಾಂಗ್ರೆಸ್‌ ಸೇರುವುದಿಲ್ಲ. ಬದಲಿಗೆ ಕಾಂಗ್ರೆಸ್‌ಗೆ ಬೆಂಬಲ ನೀಡುತ್ತೇನೆ’ ಎಂದು ಬಿಜೆಪಿ ತೊರೆದಿರುವ ವಿಧಾನಪರಿಷತ್ತಿನ ಮಾಜಿ ಸದಸ್ಯ ಕೆ.ಬಿ.ಶಾಣಪ್ಪ ತಿಳಿಸಿದರು.

‘ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಶಾಮರಾವ ಪ್ಯಾಟಿ, ಮಹಾನಗರ ಪಾಲಿಕೆಯ ಹಲವುಸದಸ್ಯರು ಹಾಗೂ ನನ್ನ ಬೆಂಬಲಿಗರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT