‘ರಾಹುಲ್‌ ನಿರ್ಧಾರವೇ ಅಂತಿಮ’

7
ತೃತೀಯ ರಂಗ ರಚನೆಗಾಗಿ ಎಲ್ಲರೊಂದಿಗೆ ಮಾತುಕತೆ: ದೇವೇಗೌಡ

‘ರಾಹುಲ್‌ ನಿರ್ಧಾರವೇ ಅಂತಿಮ’

Published:
Updated:

ನವದೆಹಲಿ: ಮೈತ್ರಿ ಸರ್ಕಾರ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಚರ್ಚಿಸಲು ಕಾಂಗ್ರೆಸ್ ರಚಿಸಿರುವ ಸಮನ್ವಯ ಸಮಿತಿಯ ಅಧಿಕಾರ ವ್ಯಾಪ್ತಿಯ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಜೆಡಿಎಸ್‌ ಮುಖಂಡ ಎಚ್‌.ಡಿ. ದೇವೇಗೌಡ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರ ನಿರ್ಧಾರವೇ ಅಂತಿಮ ಎಂದು ತಿಳಿಸಿದ್ದಾರೆ.

ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್ ಮಂಡನೆ ಕುರಿತು ಯಾರು ಏನೇ ಹೇಳಿಕೆ ನೀಡಿದ್ದರೂ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬಜೆಟ್‌ ಮಂಡಿಸಲಿದ್ದಾರೆ. ಈ ಬಗ್ಗೆ ಕಾಂಗ್ರೆಸ್‌ ವರಿಷ್ಠರ ನಿರ್ಧಾರವೇ ಅಂತಿಮ ಎಂದು ಹೇಳುವ ಮೂಲಕ ಸಮನ್ವಯ ಸಮಿತಿ ಮುಖ್ಯಸ್ಥರಾದ ಸಿದ್ದರಾಮಯ್ಯ ಸ್ಥಾನಕ್ಕೆ ಯಾವುದೇ ಅರ್ಥ ಇಲ್ಲ ಎಂದು ಪರೋಕ್ಷವಾಗಿ ಕುಟುಕಿದರು.

‘ಸರ್ಕಾರ ರಚನೆಗಾಗಿ ಜೆಡಿಎಸ್‌ ಜೊತೆ ಕೈಜೋಡಿಸಬೇಕು ಎಂಬ ತೀರ್ಮಾನ ಕಾಂಗ್ರೆಸ್‌ನದ್ದಾಗಿದೆ. ಕಾಂಗ್ರೆಸ್‌ ಪಕ್ಷದ ಮುಖಂಡರೇ ಸಮನ್ವಯ ಸಮಿತಿ ರಚಿಸಿದ್ದಾರೆ’ ಎಂದ ಅವರು, ‘ಇದೀಗ ಹೊರಬಿದ್ದಿರುವ ಸಿದ್ದರಾಮಯ್ಯ ಅವರ ಭಾವನೆಗಳ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀಡಲಾರೆ ಎಂದರಲ್ಲದೆ, ‘ಆ ಸಮಿತಿಯ ನಿರ್ಧಾರಗಳಿಗೆ ಬೆಲೆ ಇಲ್ಲವೇ’ ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು.

‘ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಮೈತ್ರಿ ಸರ್ಕಾರ ಬಜೆಟ್‌ ಮಂಡಿಸುವುದು ಸಹಜ’ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ಮುಖಂಡ ಎಂ.ವೀರಪ್ಪ ಮೊಯಿಲಿ ಅಭಿಪ್ರಾಯಪಟ್ಟಿದ್ದಾರೆ. ರಾಜ್ಯ ವಿಧಾನಸಭೆಯ ಜಂಟಿ ಅಧಿವೇಶನ ಜುಲೈ 2ರಂದು ನಡೆಯಲಿದೆ. ಜುಲೈ 5ರಂದು ಬಜೆಟ್‌ ಮಂಡನೆಯಾಗಲಿದೆ ಎಂದು ಅವರು ಪುನರುಚ್ಚರಿಸಿದರು.

 ಕಾವೇರಿ: ತಮಿಳುನಾಡಿಗೆ ಷರತ್ತಿಲ್ಲ

ನವದೆಹಲಿ: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸಿ ಅಧಿಸೂಚನೆ ಹೊರಡಿಸಿರುವ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಸಾಕಷ್ಟು ಷರತ್ತುಗಳನ್ನು ವಿಧಿಸಿದೆ. ಆದರೆ, ತಮಿಳುನಾಡಿಗೆ ಯಾವುದೇ ರೀತಿಯ ಷರತ್ತು ವಿಧಿಸಲಾಗಿಲ್ಲ ಎಂದು ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ದೇವೇಗೌಡ– ಲೆಹರ್‌ಸಿಂಗ್‌ ಭೇಟಿ: ಕರ್ನಾಟಕ ಭವನ– 1ರಲ್ಲಿ ತಂಗಿರುವ ಎಚ್‌.ಡಿ. ದೇವೇಗೌಡ ಅವರನ್ನು ಗುರುವಾರ ವಿಧಾನಪರಿಷತ್‌ ಸದಸ್ಯ ಲೆಹರ್‌ ಸಿಂಗ್‌ ಭೇಟಿ ಮಾಡಿ ಚರ್ಚಿಸಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಆಪ್ತರಾಗಿರುವ ಲೆಹರ್‌ ಸಿಂಗ್‌, ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿರುವ ಸಂದರ್ಭದಲ್ಲೇ ದೇವೇಗೌಡ ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

**

‘ನಾನು ಕಾಂಗ್ರೆಸ್‌ ಮುಖಂಡರನ್ನು ಭೇಟಿ ಮಾಡಲು ನವದೆಹಲಿಗೆ ಬಂದಿಲ್ಲ. ರಕ್ಷಣಾ ಸಮಿತಿ ಸಭೆಯಲ್ಲಿ ಭಾಗವಹಿಸಲೆಂದು ಬಂದಿದ್ದೆ, ಆದರೆ, ಸಭೆ ಮುಂದೂಡಲಾಗಿದೆ
ಎಚ್‌.ಡಿ. ದೇವೇಗೌಡ

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !