ಮಂಗಳವಾರ, ಫೆಬ್ರವರಿ 25, 2020
19 °C

ವಿದ್ಯಾರ್ಥಿನಿ ಕೊಲೆ ಪ್ರಕರಣ: ಹೋರಾಟಕ್ಕೆ ಸಿದ್ಧ– ಕುಂವೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ನಗರದಲ್ಲಿ ಈಚೆಗೆ ಕೊಲೆಯಾಗಿರುವ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ನಟ ಪ್ರಕಾಶ್‌ ರೈ ಹಾಗೂ ಮಹಿಳಾ ಸಂಘಟನೆಗಳೊಂದಿಗೆ ಹೋರಾಟ ಆರಂಭಿಸುವುದಾಗಿ ಕಾದಂಬರಿಕಾರ ಕುಂ.ವೀರಭದ್ರಪ್ಪ ಹೇಳಿದರು.

ಮೃತ ವಿದ್ಯಾರ್ಥಿನಿ ಪಾಲಕರನ್ನು ಸೋಮವಾರ ಭೇಟಿ ಮಾಡಿ ಸಾಂತ್ವನ ಹೇಳಿದ ಅವರು, ‘ಮೇಲ್ನೋಟಕ್ಕೆ ಆತ್ಮಹತ್ಯೆ ಎನ್ನುವ ನಿರ್ಧಾರಕ್ಕೆ ಪೊಲೀಸರು ಬರಬಾರದು. ಈ ಬಗ್ಗೆ ಕೂಲಂಕಷ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.

‘ರಾಯಚೂರು ಕರ್ನಾಟಕದಲ್ಲಿದೆ. ಇದು ಉತ್ತರ ಪ್ರದೇಶ ಅಥವಾ ಬಿಹಾರವಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ಸಿಗಬೇಕು. ಈ ವಿದ್ಯಾರ್ಥಿನಿಯು ರಕ್ಷಣೆ ಇಲ್ಲದ್ದಕ್ಕಾಗಿ ಸಾವನ್ನಪ್ಪಿದ್ದಾಳೆ. ಆಕೆಯ ಮೇಲೆ ನಡೆದ ಹಲ್ಲೆ, ಕೊಲೆಯು ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು