ಶುಕ್ರವಾರ, ಮಾರ್ಚ್ 5, 2021
27 °C
ರೈಲ್ವೆ ಸಚಿವರೊಂದಿಗೆ ಡಿ.ವಿ. ಸದಾನಂದ ಗೌಡ ಮಾತುಕತೆ

ದೆಹಲಿ ಮತ್ತು ಸುತ್ತಮುತ್ತಲಿನ ರಾಜ್ಯದ ಕನ್ನಡಿಗರಿಗೆ ವಿಶೇಷ ರೈಲು ವ್ಯವಸ್ಥೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಲಾಕ್‌ಡೌನ್‌ನಿಂದ ದೆಹಲಿ ಮತ್ತು ಸುತ್ತಮುತ್ತಲಿನ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಕರ್ನಾಟಕಕ್ಕೆ ವಾಪಸ್ ಕರೆತರಲು ಕರ್ನಾಟಕದಿಂದ ವಿಶೇಷ ರೈಲು ಸಂಚಾರಕ್ಕೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ.

ಈ ಸಂಬಂಧ ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯೆಲ್ ಅವರೊಂದಿಗೆ ಮಾತುಕತೆ ನಡೆಸಿರುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

‘ಒಟ್ಟು ಪ್ರಯಾಣಿಕರ ಸಾಮರ್ಥ್ಯ ಶೇ 90ರಷ್ಟು ಕಡಿಮೆ ಇದ್ದರೂ ವಿಶೇಷ ರೈಲು ವ್ಯವಸ್ಥೆ ಮಾಡುವಂತೆ ಗೋಯೆಲ್ ಅವರನ್ನು ವಿನಂತಿಸಿಕೊಂಡಿದ್ದೇನೆ. ಇದಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ’ ಎಂದು ಅವರು ಹೇಳಿದರು.

‘ಸೇವಾಸಿಂಧುಕರ್ನಾಟಕ (sevasinduKarnataka) ವೆಬ್‌ಸೈಟಿಗೆ ಇದುವರೆಗೆ ದೆಹಲಿಯಲ್ಲಿರುವ 680 ಕನ್ನಡಿಗರು ನೋಂದಣಿ ಮಾಡಿಕೊಂಡಿದ್ದಾರೆ. ಹರಿಯಾಣ, ನೋಯ್ಡಾ, ಪಂಜಾಬ್, ಚಂಡೀಗಡಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ದೆಹಲಿಯ ಕರ್ನಾಟಕದ ಭವನದ ಅಧಿಕಾರಿಗಳಿಗೆ ಕೋರಿದ್ದೇನೆ. ಅವರೂ ಬಂದಲ್ಲಿ ಈ ಸಂಖ್ಯೆ ಹೆಚ್ಚಬಹುದು’ ಎಂದು ಅವರು ತಿಳಿಸಿದರು.

ದೆಹಲಿ ಅಕ್ಕಪಕ್ಕದ ರಾಜ್ಯದಲ್ಲಿರುವ ಕನ್ನಡಿಗರು ದೆಹಲಿಗೆ ಬರಲು ಬೇಕಾಗಿರುವ ಅಗತ್ಯ ಪಾಸುಗಳ ವ್ಯವಸ್ಥೆ ಮಾಡಲು ಅಧಿಕಾರಿಗಳು ನೆರೆ ರಾಜ್ಯದವರೊಂದಿಗೆ ಮಾತನಾಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು