ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

8 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’!

Last Updated 7 ಏಪ್ರಿಲ್ 2020, 5:52 IST
ಅಕ್ಷರ ಗಾತ್ರ

ಬೆಂಗಳೂರು: ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 23 ಮತ್ತು 24ರಂದು ಭಾರೀ ಮಳೆಯಾಗಲಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆ ಪ್ರಮಾಣ ಕಡಿಮೆ ಇರಲಿದೆ. ಉತ್ತರ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

ಭಾನುವಾರ ಬೆಳಿಗ್ಗೆ ವರೆಗೆ ಕೋಲಾರದಲ್ಲಿ 10 ಸೆಂ.ಮೀ.ಮಳೆಯಾಗಿದೆ. ಚಿಂತಾಮಣಿ, ಮಾಲೂರು 5, ಶಿಡ್ಲಘಟ್ಟ, ಪಾವಗಡ 4, ಹೊಸಕೋಟೆ, ಬಂಗಾರಪೇಟೆ 3, ಗುಡಿಬಂಡೆ, ತೊಂಡೇಬಾವಿಯಲ್ಲಿ ತಲಾ 2 ಸೆಂ.ಮೀ.ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT