ಚಿಕ್ಕಮಗಳೂರಿನಲ್ಲಿ ಮಳೆ

ಬುಧವಾರ, ಜೂನ್ 26, 2019
24 °C

ಚಿಕ್ಕಮಗಳೂರಿನಲ್ಲಿ ಮಳೆ

Published:
Updated:

ಚಿಕ್ಕಮಗಳೂರು: ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ಸಂಜೆ ಗುಡುಗುಸಹಿತ ಮಳೆ ಸುರಿಯಿತು.

ಸಂಜೆ 5ಗಂಟೆ ಸುಮಾರಿಗೆ ಮಳೆ ಶುರುವಾಯಿತು. ಗುಡುಗಿನ ಆರ್ಭಟ ಇತ್ತು. ಗಾಳಿಯ ಅಬ್ಬರವೂ ಇತ್ತು. ಮಳೆ ತುಂತುರು ಶುರುವಾಗಿ ನಂತರ ರಭಸವಾಗಿ ಸುರಿಯಿತು. ಸುಮಾರು 20 ನಿಮಿಷ ಮಳೆಯಾಯಿತು.

ಮೂಡಿಗೆರೆ ತಾಲ್ಲೂಕಿನಾದ್ಯಂತ ಭಾನುವಾರ ಮಧ್ಯಾಹ್ನ ಉತ್ತಮ ಮಳೆಯಾಯಿತು. ಪಟ್ಟಣ ಸೇರಿದಂತೆ ಭೂತನಕಾಡು, ಕುದುರೆಗುಂಡಿ, ಹ್ಯಾಂಡ್ ಪೋಸ್ಟ್, ಬಿದರಹಳ್ಳಿ, ಮುಗ್ರಹಳ್ಳಿ, ಹೊರಟ್ಟಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಒಂದು ತಾಸಿಗೂ ಅಧಿಕ ಕಾಲ ಮಳೆಯಾಗಿದೆ.

ಕಳಸ ಪಟ್ಟಣದ ಆಸುಪಾಸಿನ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಮಳೆ ಸುರಿದಿದೆ. ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ಅರ್ಧ ಗಂಟೆ ಕಾಲ ಮಳೆಯಾಗಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣ ಮತ್ತು ಐಮಂಗಲ ಹೋಬಳಿ ಸೇರಿದಂತೆ ವಿವಿಧೆಡೆ ಭಾನುವಾರ ಸಂಜೆ ಸೋನೆ ಮಳೆಯಾಯಿತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !