ಹೊಸಪೇಟೆ ಸೇರಿ ರಾಜ್ಯದ ಹಲವೆಡೆ ತಂಪೆರೆದ ಬಿರುಗಾಳಿ ಮಳೆ

ಭಾನುವಾರ, ಏಪ್ರಿಲ್ 21, 2019
26 °C

ಹೊಸಪೇಟೆ ಸೇರಿ ರಾಜ್ಯದ ಹಲವೆಡೆ ತಂಪೆರೆದ ಬಿರುಗಾಳಿ ಮಳೆ

Published:
Updated:
Prajavani

ಹೊಸಪೇಟೆ: ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಸಂಜೆ ಬಿರುಗಾಳಿ ಸಹಿತ ಮಳೆ ಸುರಿಯಿತು.

ಬೆಳಿಗ್ಗೆಯಿಂದ ರಣಬಿಸಿಲು ಇತ್ತು. ಸಂಜೆ ಏಕಾಏಕಿ ದಟ್ಟ ಕಾರ್ಮೋಡ ಆವರಿಸಿಕೊಂಡು, ಬಿರುಗಾಳಿಯೊಂದಿಗೆ ಜೋರಾಗಿ ಮಳೆ ಸುರಿಯಿತು.

ಸಂಜೆ 4.15ಕ್ಕೆ ಆರಂಭವಾದ ವರ್ಷಧಾರೆ 4.40ರ ವರೆಗೆ ಎಡೆಬಿಡದೆ ಸುರಿಯಿತು. ಅಕಾಲಿಕ ಮಳೆಯಿಂದ ವಾತಾವರಣ ಸಂಪೂರ್ಣ ತಂಪಾಗಿತ್ತು. ಕೆಲವು ದಿನಗಳಿಂದ ತಾಪಮಾನ 40ರಿಂದ 41 ಡಿಗ್ರಿ ಸೆಲ್ಸಿಯಸ್‌ ಇರುತ್ತಿದ್ದು, ಕೆಂಡದಂತಹ ಬಿಸಿಲಿನಿಂದ ಜನ ಕಂಗೆಟ್ಟಿದ್ದರು. ವರ್ಷದ ಮೊದಲ ಮಳೆಯ ಸಿಂಚನದಿಂದ ಜನ ಸ್ವಲ್ಪ ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು.

ತಾಲ್ಲೂಕಿನ ಕಮಲಾಪುರ, ಹೊಸೂರು, ಕೊಂಡನಾಯಕನಹಳ್ಳಿ, ಮಲಪನಗುಡಿ, ಹೊಸಮಲಪನಗುಡಿ, ನಾಗೇನಹಳ್ಳಿ, ಬಸವನದುರ್ಗ ಸೇರಿದಂತೆ ಇತರೆ ಕಡೆಗಳಲ್ಲಿಯೂ ಮಳೆಯಾಗಿರುವುದು ವರದಿಯಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !