ಸೋಮವಾರ, ಅಕ್ಟೋಬರ್ 21, 2019
22 °C

ಬಿರುಸಿನ ಮಳೆ: ಚಾವಣಿ ಕುಸಿದು ಮೂವರ ಸಾವು

Published:
Updated:

ಹುಬ್ಬಳ್ಳಿ: ಉತ್ತರ ಕನ್ನಡ, ಧಾರವಾಡ, ಬಾಗಲಕೋಟೆ, ಗದಗ, ವಿಜಯಪುರ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಯ ವಿವಿಧೆಡೆ ಶನಿವಾರ ರಾತ್ರಿಯಿಂದ ಭಾನುವಾರದ ಬೆಳಗಿನವರೆಗೆ ಧಾರಾಕಾರ ಮಳೆ ಸುರಿಯಿತು.

ಬಾಗಲಕೋಟೆ ತಾಲ್ಲೂಕಿನ ಕಿರಸೂರಿನಲ್ಲಿ ಮನೆ ಚಾವಣಿ ಕುಸಿದು ಒಂದೇ ಕುಟುಂಬದ ಮೂವರು ಮೃತರಾಗಿದ್ದಾರೆ.   ಹುಬ್ಬಳ್ಳಿಯ ಬೈರಿದೇವರಕೊಪ್ಪದ ಅಗಸಿ ಓಣಿಯಲ್ಲಿ ಮನೆ ಕುಸಿದು ದಂಪತಿ ಗಾಯಗೊಂಡಿದ್ದಾರೆ. ಹಳೇ ಹುಬ್ಬಳ್ಳಿಯ ಕೃಷ್ಣಾಪುರ ಓಣಿಯಲ್ಲಿ ಮಳೆಗೆ ನಾಲ್ಕು ಮನೆಗಳು ಕುಸಿದಿವೆ.

ವಿಜಯಪುರ ಜಿಲ್ಲೆ ನಿಡಗುಂದಿಯಲ್ಲಿ ಸಿಡಿಲು ಬಡಿದು ಹಸು ಮೃತಪಟ್ಟಿದೆ. ಮಲಪ್ರಭಾ ನದಿ ಹರಿವು ಹೆಚ್ಚಾದ ಪರಿಣಾಮ ಗದಗ ಜಿಲ್ಲೆಯ ಹೊಳೆ
ಆಲೂರು–ಬಾದಾಮಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹೊಳೆಆಲೂರಿನಲ್ಲಿ ನೆರೆ ಸಂತ್ರಸ್ತರ ಆಶ್ರಯ ಮನೆಗಳಿಗೆ ಮಳೆ ನೀರು ನುಗ್ಗಿ ಸಮಸ್ಯೆಯಾಗಿದೆ. ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯಲ್ಲಿ ಮಳೆಗೆ 14 ಮನೆಗಳು ಹಾನಿಯಾಗಿವೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)