ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧೆಡೆ ಉತ್ತಮ ಮಳೆ

Last Updated 19 ಮೇ 2020, 21:12 IST
ಅಕ್ಷರ ಗಾತ್ರ

ಬೆಂಗಳೂರು: ದಾವಣಗೆರೆ, ಧಾರವಾಡ, ಬಳ್ಳಾರಿ ಜಿಲ್ಲೆಯ ವಿವಿಧೆಡೆ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಕೊಡಗು ಭಾಗ
ದಲ್ಲಿ ಸಾಧಾರಣ ಮಳೆಯಾಗಿದೆ.

ದಾವಣಗೆರೆಯಲ್ಲಿ ಉತ್ತಮ ಮಳೆಯಾಗಿದ್ದರೆ,ಉಚ್ಚಂಗಿದುರ್ಗದ ಅರಸೀಕೆರೆ ಹೋಬಳಿ ವ್ಯಾಪ್ತಿಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ಹೊಲಗಳು ಜಲಾವೃತವಾಗಿದ್ದವು.

ಚನ್ನಗಿರಿ ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಬಾಳೆ ತೋಟ ಹಾನಿಗೊಂಡಿದೆ.ತೀರ್ಥಹಳ್ಳಿ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ತಂತಿ ಮೇಲೆ ಮರಗಳು ಉರುಳಿಬಿದ್ದವು. ಕೆಲ ಮನೆಗಳಿಗೆ ಹೊದಿಸಿದ್ದ ಹೆಂಚು, ಶೀಟ್‌ಗಳು ಹಾರಿಹೋಗಿವೆ. ಬೆಳಗಾವಿ ನಗರ, ಬೈಲಹೊಂಗಲ ಹಾಗೂ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯಲ್ಲಿಮಳೆಯಾಗಿದೆ. ಕೊಡಗು ಜಿಲ್ಲೆಯ ವಿವಿಧೆಡೆ, ಮೈಸೂರಿನಲ್ಲಿ ಸಾಧಾರಣ ಮಳೆಯಾಗಿದೆ.

ಗದಗ ಜಿಲ್ಲೆಯ ಡಂಬಳ ವ್ಯಾಪ್ತಿಯಲ್ಲಿ ಹಲವು ಗ್ರಾಮಗಳಲ್ಲಿ ಮನೆಗಳ ಚಾವಣಿ ಶೀಟ್‌ಗಳು ಹಾರಿವೆ. ಹೂವಿನಹಡಗಲಿ ತಾಲ್ಲೂಕಿನಾದ್ಯಂತ ಅರ್ಧ ಗಂಟೆ ಧಾರಾಕಾರ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT