ಮಂಗಳವಾರ, ಜುಲೈ 27, 2021
26 °C

ರಾಜ್ಯದ ವಿವಿಧೆಡೆ ಉತ್ತಮ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮುಂಗಾರು ಅಬ್ಬರ ಮುಂದುವರಿದಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಂಗಳವಾರ ಭಾರಿ ಮಳೆ ಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಸಮುದ್ರದ ಅಬ್ಬರ ಹೆಚ್ಚಿದೆ.

ಕಲಬುರ್ಗಿ, ಬೀದರ್‌ ಜಿಲ್ಲೆ ಯಾದ್ಯಂತ ಭಾರಿ ಮಳೆಯಾಗಿದೆ. ರಾಯಚೂರು ನಗರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ ಸುರಿಯಿತು. ಕಲಬುರ್ಗಿ ನಗರದಲ್ಲಿ 76.50 ಮಿಲಿ ಮೀಟರ್‌ ಮಳೆಯಾಗಿದೆ.

ಹಾನಿಗೀಡಾಗಿದ್ದ ಮನೆ ಸಮುದ್ರ ಪಾಲು: ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಸಮುದ್ರದ ಅಬ್ಬರ ಹೆಚ್ಚಿದೆ.

ಉಳ್ಳಾಲದ ಸೋಮೇಶ್ವರ ತೀರದಲ್ಲಿ ಕಳೆದ ವರ್ಷ ಅಲೆಗೆ ಹಾನಿ ಗೀಡಾಗಿದ್ದ ಮನೆಯೊಂದು ಸಮುದ್ರ ಪಾಲಾ ಗಿದೆ. ಪುತ್ತೂರು, ವಿಟ್ಲದ ಕನ್ಯಾನದಲ್ಲಿ ಕೃತಕ ನೆರೆ ಉಂಟಾಗಿತ್ತು. ಬಂಟ್ವಾಳ ತಾಲ್ಲೂಕಿನ ಕೊಡ್ಮಾಣ್ ಗ್ರಾಮದ ಮಾಲತಿ ಶಿವರಾಂ ಅವರ ಮನೆಯ ಪಕ್ಕದ ತಡೆಗೋಡೆ ಕುಸಿದು ಬಿದ್ದಿದೆ. ಮೂಡುನಡುಗೋಡು ಗ್ರಾಮದ ಹೆಲೆನ್ ಅರ್ಬನ್ ಲೋಬೊ ಅವರ ಮನೆ ಚಾವಣಿ ಮೇಲೆ ಮರ ಬಿದ್ದು ಹಾನಿಯಾಗಿದೆ. ಉಡುಪಿ ಜಿಲ್ಲೆಯ ಪಡುಬಿದ್ರಿ ಪಾದೆಬೆಟ್ಟು ಗ್ರಾಮದ ಹೊಯಿಗೆ ತೋಟ ಪ್ರದೇಶದಲ್ಲಿ 6 ಮನೆಗಳು ಜಲಾವೃತಗೊಂಡು ನಿವಾಸಿಗಳು ಸಮಸ್ಯೆ ಅನುಭವಿಸಿದರು.

ಕೊಡಗು ಜಿಲ್ಲೆಯ ಮಡಿಕೇರಿ, ನಾಪೋಕ್ಲು, ಭಾಗಮಂಡಲ, ಚೇರಂ ಬಾಣೆ, ಅಪ್ಪಂಗಳ, ಕಾಟಕೇರಿ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಹಾಸನ ಸೇರಿದಂತೆ ಜಿಲ್ಲೆಯ ಆಲೂರು, ಶ್ರವಣಬೆಳಗೊಳ ಹಾಗೂ ಹೆತ್ತೂರು ಭಾಗದಲ್ಲಿ ತುಂತುರು ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆ ಯಾಗಿದೆ. ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಸೋನೆ ಮಳೆಯಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಮಂಗಳವಾರ ಸಾಧಾರಣ ಮಳೆ ಯಾಗಿದೆ. ಬೆಳಗಾವಿ, ಖಾನಾಪುರ ಹಾಗೂ ಚಿಕ್ಕೋಡಿಯಲ್ಲಿ ಜೋರಾಗಿ ಮಳೆಯಾಗಿದೆ. ಮಲಪ್ರಭಾ, ಘಟ ಪ್ರಭಾ, ಕೃಷ್ಣಾ ನದಿಗಳ ಒಳಹರಿವು ಹೆಚ್ಚಳವಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ, ಅಂಕೋಲಾ, ಜೊಯಿಡಾ, ಕಾರವಾರದಲ್ಲಿ ಇಡೀ ದಿನ ಮಳೆ ಸುರಿದರೆ, ಭಟ್ಕಳದಲ್ಲಿ ಸ್ವಲ್ಪ ಕಡಿಮೆ ಪ್ರಮಾಣದಲ್ಲಿ ಬಂತು. ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ರಭಸದ ಗಾಳಿಗೆ ಮರವೊಂದು ರಸ್ತೆಗೆ ಉರುಳಿಬಿದ್ದಿದೆ. ತಾಳಿಕೋಟೆ, ಬಸವನ ಬಾಗೇವಾಡಿ, ಕೊಲ್ಹಾರ, ನಿಡಗುಂದಿ, ಮುದ್ದೇಬಿಹಾಳದಲ್ಲಿ ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು