ಬುಧವಾರ, ನವೆಂಬರ್ 20, 2019
26 °C

ಇಂದು, ನಾಳೆ ಮಳೆ ಸಂಭವ

Published:
Updated:

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನಲ್ಲಿ ಇದೇ 18 ಹಾಗೂ ದಕ್ಷಿಣ ಒಳನಾಡಿನ ಹಲವೆಡೆ  19ರಂದು ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಈ ಭಾಗಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಕರಾವಳಿ ಜಿಲ್ಲೆಗಳಲ್ಲಿ ಭಾನುವಾರ ದವರೆಗೆ ವ್ಯಾಪಕ ಮಳೆಯಾಗಲಿದ್ದು, ಸೆ.20 ಮತ್ತು 21ರಂದು ಭಾರೀ ಮಳೆಯಾಗಲಿದೆ. ಹೀಗಾಗಿ ಈ ಭಾಗದಲ್ಲೂ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ ಎಂದು ತಿಳಿಸಿದೆ. 

ಮಂಗಳವಾರ ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ 9 ಸೆಂ.ಮೀ.ಮಳೆಯಾಗಿದೆ. ರಾಮನಗರ 6, ಕೆಂಭಾವಿ 4, ಚನ್ನಪಟ್ಟಣ, ಬೆಂಗಳೂರು, ಕನಕಪುರ 3, ಮಡಿಕೇರಿ, ಆಗುಂಬೆಯಲ್ಲಿ ತಲಾ 2 ಸೆಂ.ಮೀ.ಮಳೆಯಾಗಿದೆ.

ಪ್ರತಿಕ್ರಿಯಿಸಿ (+)