ಶನಿವಾರ, ಅಕ್ಟೋಬರ್ 19, 2019
28 °C

ದಕ್ಷಿಣ ಒಳನಾಡು: ಇಂದು ಗುಡುಗು ಸಹಿತ ಮಳೆ

Published:
Updated:

ಬೆಂಗಳೂರು: ದಕ್ಷಿಣ ಒಳನಾಡಿನ ಕಡೆಗೆ ನೈರುತ್ಯ ಮಾನ್ಸೂನ್ ಮಾರುತಗಳು ವೇಗವಾಗಿ ಬೀಸುತ್ತಿದ್ದು, ಈ ಭಾಗದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅ.13ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಭಾನುವಾರ ಈ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಮಳೆ ತಗ್ಗಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲ ಭಾಗಗಳಲ್ಲಿ ಸೋಮವಾರವೂ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶನಿವಾರ ಚಿಕ್ಕಬಳ್ಳಾಪುರ ಜಿಲ್ಲೆಯ ತೊಂಡೇಬಾವಿಯಲ್ಲಿ 9 ಸೆಂ.ಮೀ.ಮಳೆಯಾಗಿದೆ. ಧರ್ಮಸ್ಥಳ, ಸುಳ್ಯ 6, ತೀರ್ಥಹಳ್ಳಿ 5, ಉಡುಪಿ 4, ಸುಬ್ರಹ್ಮಣ್ಯ, ಹಾಸನದಲ್ಲಿ ತಲಾ 3 ಸೆಂ.ಮೀ.ಮಳೆಯಾಗಿದೆ.

Post Comments (+)