ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಉತ್ತರ ಒಳನಾಡಿನ ಬೀದರ್‌, ಕಲಬುರ್ಗಿ ರಾಯಚೂರ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Last Updated 20 ಆಗಸ್ಟ್ 2019, 19:45 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ಉತ್ತರ ಒಳನಾಡಿನ ಬೀದರ್‌, ಕಲಬುರ್ಗಿ, ರಾಯಚೂರು ಜಿಲ್ಲೆಗಳಲ್ಲಿ ಆಗಸ್ಟ್‌ 21ರಂದು ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್‌.ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.

‘ಉತ್ತರ ಒಳನಾಡಿನ ಹಲವೆಡೆ ಮಂಗಳವಾರ ಹೆಚ್ಚು ಮಳೆಯಾಗಿದೆ. ಬುಧವಾರವೂ ಈ ಭಾಗಗಳಲ್ಲಿ ಮಳೆ ಹೆಚ್ಚಾಗಲಿದೆ. ಉಳಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ’ ಎಂದು ಅವರು ತಿಳಿಸಿದರು.

ಮಂಗಳವಾರ ಹಾಸನದಲ್ಲಿ 10 ಸೆಂ.ಮೀ.ಮಳೆಯಾಗಿದೆ. ಸುಳ್ಯ 8, ಮಂಕಿ, ಹುಮನಾಬಾದ್, ಕೊಪ್ಪದಲ್ಲಿ ತಲಾ 7, ಮೈಸೂರು, ಕೋಲಾರ 5, ಭಟ್ಕಳ, ಪಾವಗಡ, ನೆಲಮಂಗಲದಲ್ಲಿ ತಲಾ 4 ಸೆಂ.ಮೀ.ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT