ಭಾನುವಾರ, ಆಗಸ್ಟ್ 25, 2019
23 °C

ಇಂದು, ನಾಳೆ ಸಾಧಾರಣ ಮಳೆ ಸಾಧ್ಯತೆ

Published:
Updated:

ಬೆಂಗಳೂರು: ರಾಜ್ಯದ ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಇದೇ 14 ಮತ್ತು 15ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ‌

ಕರಾವಳಿ ಭಾಗದಲ್ಲಿ ಪಶ್ಚಿಮ ಹಾಗೂ ನೈರುತ್ಯ ದಿಕ್ಕಿನಿಂದ ಗಂಟೆಗೆ 45ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, 3.0 ರಿಂದ 3.3 ಮೀಟರ್‌ನಷ್ಟು ಎತ್ತರದ ಅಲೆಗಳೂ ಏಳುತ್ತಿವೆ. ಹೀಗಾಗಿ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂದಿನ 48 ಗಂಟೆ ಅವಧಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ತಾಪಮಾನ ಗರಿಷ್ಠ 27, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ 14 ಸೆಂ.ಮೀ.ಮಳೆಯಾಗಿದೆ. ಪಣಂಬೂರು 13, ಬಂಟ್ವಾಳ 12, ಭಾಗಮಂಡಲ 10, ಕೊಲ್ಲೂರು, ಭಟ್ಕಳದಲ್ಲಿ ತಲಾ 9, ಮೂಡುಬಿದರೆ 8, ಕಾರ್ಕಳ, ಕುಂದಾಪುರ ಹಾಗೂ ಆಗುಂಬೆಯಲ್ಲಿ ತಲಾ 7 ಸೆಂ.ಮೀ.ಮಳೆಯಾಗಿದೆ. 

Post Comments (+)