ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ತಿಂಗಳಲ್ಲಿ ಮಳೆ-ಸಿಡಿಲಿಗೆ 57 ಸಾವು

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ
Last Updated 6 ಜುಲೈ 2020, 20:51 IST
ಅಕ್ಷರ ಗಾತ್ರ

ಬೆಂಗಳೂರು:ಏಪ್ರಿಲ್‍ನಿಂದ ಜು.5ರವರೆಗೆ ರಾಜ್ಯದಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಹಾಗೂ ಮಳೆಯಿಂದ ಒಟ್ಟು 57 ಮಂದಿ ಮರಣ ಹೊಂದಿರುವುದಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ವರದಿ ಬಿಡುಗಡೆ ಮಾಡಿದೆ.

ಏಪ್ರಿಲ್‍ನಿಂದ ಜೂನ್ ಕೊನೆಯವರೆಗೂ ರಾಜ್ಯ ಲಾಕ್‍ಡೌನ್ ಆಗಿತ್ತು. ಮೂರು ತಿಂಗಳಲ್ಲಿ ಮೃತಪಟ್ಟ 57 ಮಂದಿಯಲ್ಲಿ 45 ಮಂದಿ ಸಿಡಿಲು ಬಡಿದು ಸತ್ತಿದ್ದಾರೆ.

ಜೀವಹಾನಿಯ ಜೊತೆಗೆ 3,248 ಮನೆಗಳಿಗೂ ಹಾನಿ ಸಂಭವಿಸಿದ್ದು, 68 ಮನೆಗಳು ಸಂಪೂರ್ಣವಾಗಿ ಹಾಗೂ 3,180 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. 262 ಜಾನುವಾರು ಮೃತಪಟ್ಟಿವೆ. 40 ಸಾವಿರ ಹೆಕ್ಟೇರ್ ಭೂಪ್ರದೇಶ ನಾಶವಾಗಿದೆ.

‘ಮಳೆ- ಪ್ರವಾಹದಲ್ಲಿ ಸಿಲುಕಿದ್ದ 49 ಮಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ, ಕೊಡಗು, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್‌) ತಂಡಗಳು ಸಜ್ಜಾಗಿವೆ. 49 ಪರಿಹಾರ ಕೇಂದ್ರಗಳನ್ನು ತೆರೆದಿದ್ದೇವೆ' ಎಂದು ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT