ಶುಕ್ರವಾರ, ನವೆಂಬರ್ 15, 2019
23 °C

ಕರಾವಳಿಯಲ್ಲಿ ಇಂದು ಹೆಚ್ಚು ಮಳೆ ಸಾಧ್ಯತೆ

Published:
Updated:

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಸೆಪ್ಟೆಂಬರ್‌ 17ರಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇದೇ 19ರವರೆಗೆ ಈ ಭಾಗದಲ್ಲಿ ವ್ಯಾಪಕ ಮಳೆಯಾಗಲಿದ್ದು, ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಹಲವೆಡೆ ಶನಿವಾರದವರೆಗೆ ಹಗುರಕ್ಕಿಂತ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲೂ ಸೆ. 18 ಮತ್ತು 19ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಸೋಮವಾರ ಉತ್ತರಕನ್ನಡ ಜಿಲ್ಲೆಯ ಮಂಕಿಯಲ್ಲಿ 8 ಸೆಂ.ಮೀ.ಮಳೆಯಾಗಿದೆ. ಗೋಕರ್ಣ, ಆಗುಂಬೆ 6, ಭಟ್ಕಳ 5, ಲಿಂಗನಮಕ್ಕಿ 4, ಮಂಗಳೂರಿನಲ್ಲಿ 3 ಸೆಂ.ಮೀ.ಮಳೆಯಾಗಿದೆ.

ಪ್ರತಿಕ್ರಿಯಿಸಿ (+)