ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ಜಿಲ್ಲೆಗಳಲ್ಲಿ ‘ಆರೆಂಜ್‌ ಅಲರ್ಟ್‌’ ಘೋಷಣೆ

Last Updated 24 ಸೆಪ್ಟೆಂಬರ್ 2019, 19:49 IST
ಅಕ್ಷರ ಗಾತ್ರ

ಬೆಂಗಳೂರು:‌ ರಾಜ್ಯದ ದಕ್ಷಿಣ ಒಳನಾಡಿನಲ್ಲಿನೈರುತ್ಯ ಮಾನ್ಸೂನ್ ಮಾರುತಗಳು ವೇಗವಾಗಿ ಬೀಸುತ್ತಿದ್ದು,ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 25 ಮತ್ತು 26ರಂದುಹೆಚ್ಚು ಮಳೆಯಾಗಲಿದೆ. ಹೀಗಾಗಿ ‌ಈ ಭಾಗದಲ್ಲಿ ‘ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಮನಗರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕರಾವಳಿ ಭಾಗವನ್ನು ಹೊರತುಪಡಿಸಿ ಬುಧವಾರ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಈ ಭಾಗದಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ ಎಂದು ತಿಳಿಸಿದೆ.

ಮಂಗಳವಾರ ಕೊಪ್ಪಳ ಜಿಲ್ಲೆಯ ಯಲಬುರ್ಗಾದಲ್ಲಿ 14 ಸೆಂ.ಮೀ.ಮಳೆಯಾಗಿದೆ. ಮಧುಗಿರಿ 12, ಬೆಂಗಳೂರು 11, ಮಳವಳ್ಳಿ 10, ಚಾಮರಾಜನಗರ 9, ಚನ್ನಪಟ್ಟಣ 8, ಕಂಪ್ಲಿ, ಮಂಡ್ಯ, ಹೆಸರಘಟ್ಟ, ಚಿಂಚೋಳಿ 7, ನೆಲಮಂಗಲ 6, ಸುಬ್ರಹ್ಮಣ್ಯ, ಕಲಬುರ್ಗಿ, ವಿಜಯಪುರದಲ್ಲಿ ತಲಾ 5 ಸೆಂ.ಮೀ.ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT