ಬುಧವಾರ, ನವೆಂಬರ್ 13, 2019
17 °C

ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

Published:
Updated:

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ನೈರುತ್ಯ ಮುಂಗಾರು ಮಾರುತಗಳು ವೇಗವಾಗಿ ಬೀಸುತ್ತಿದ್ದು, ಅ.15 ಮತ್ತು 16ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಈ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳವರೆಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮಂಗಳವಾರ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದೆ. ಬುಧವಾರ ಗದಗ, ಹಾವೇರಿ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ.

ಸೋಮವಾರ ಹಾಸನದಲ್ಲಿ 8 ಸೆಂ.ಮೀ. ಮಳೆಯಾಗಿದೆ. ಸಾಗರ 7, ಚಿಂಚೋಳಿ 6, ಧರ್ಮಸ್ಥಳ, ಮಂಕಿ 5, ತಾಳಗುಪ್ಪ, ಕೆ.ಆರ್‌.ಪೇಟೆಯಲ್ಲಿ ತಲಾ 3 ಸೆಂ.ಮೀ. ಮಳೆ ಬಿದ್ದಿದೆ. 

ಪ್ರತಿಕ್ರಿಯಿಸಿ (+)