ಗುರುವಾರ , ನವೆಂಬರ್ 21, 2019
27 °C

ನವೆಂಬರ್ 8ರಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

Published:
Updated:

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇದೇ 8ರಿಂದ ಮತ್ತೆ ಮಳೆ ಆರಂಭಗೊಳ್ಳಲಿದೆ. ಈ ಭಾಗದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಪ್ರಮಾಣ ತಗ್ಗಿದೆ. ನ.8ರವರೆಗೆ ಮಳೆ ಪ್ರಮಾಣ ಕಡಿಮೆ ಇರಲಿದೆ.

ಸೋಮವಾರ ಕಲಬುರ್ಗಿ ಜಿಲ್ಲೆಯ ಸುಲೆಪೇಟೆಯಲ್ಲಿ 2 ಸೆಂ.ಮೀ.ಮಳೆಯಾಗಿದೆ. ಪಣಂಬೂರು, ಪುತ್ತೂರು, ಸೈದಾಪುರ, ಆನವಟ್ಟಿಯಲ್ಲಿ ತಲಾ 1 ಸೆಂ.ಮೀ.ಮಳೆಯಾಗಿದೆ.

ಪ್ರತಿಕ್ರಿಯಿಸಿ (+)