ಶುಕ್ರವಾರ, ಜುಲೈ 30, 2021
25 °C

ರಾಜ್ಯದಲ್ಲಿ ಬಿರುಸುಗೊಂಡ ಮುಂಗಾರು: ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡಿನಲ್ಲಿ ಮುಂಗಾರು ಬಿರುಸುಗೊಂಡಿರುವುದರಿಂದ ಜುಲೈ 9 ಮತ್ತು 10ರಂದು ಈ ಭಾಗದ ಬಹುತೇಕ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದು, ಎರಡೂ ದಿನಗಳವರಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಅರಬ್ಬಿ ಸಮುದ್ರದಿಂದ ರಾಜ್ಯದ ಕರಾವಳಿಯೆಡೆಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಮುಂದಿನ ಐದು ದಿನಗಳವರೆಗೆ ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಒಳನಾಡಿ
ನಲ್ಲಿ ಮಳೆ ತಗ್ಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ಎಲ್ಲೆಲ್ಲಿ ಎಷ್ಟು ಮಳೆ?

ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಬುಧವಾರ 20 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಮಂಕಿ 17, ಕೋಟ 15, ಪುತ್ತೂರು, ಕಾರ್ಕಳ, ಸಿದ್ದಾಪುರ 13, ಹೊನ್ನಾವರ 12, ಕುಂದಾಪುರ, ಭಾಗಮಂಡಲ, ಹೊಸನಗರ 10, ಧರ್ಮಸ್ಥಳ 8, ಮೂಡುಬಿದರೆ, ಉಡುಪಿ, ಶೃಂಗೇರಿ 7,  ಬೆಳ್ತಂಗಡಿ, ಸುಬ್ರಹ್ಮಣ್ಯ, ತೀರ್ಥಹಳ್ಳಿ 6, ಮಂಗಳೂರು, ಮೂಡಿಗೆರೆ, ಕೊಪ್ಪ 4, ಕಾರವಾರ, ಬೆಳಗಾವಿ, ನಿಪ್ಪಾಣಿ, ಧಾರವಾಡ, ವಿರಾಜಪೇಟೆ, ಸೊರಬ, ಬೈಲಹೊಂಗಲ, ನರಗುಂದ, ಸಾಗರ, ಹಾಸನ 2, ಚಿಕ್ಕೋಡಿ, ಬಸವನಬಾಗೇವಾಡಿ, ರಾಯಚೂರು, ಶಿವಮೊಗ್ಗ, ಸಕಲೇಶಪುರ, ಶಿಡ್ಲಘಟ್ಟ, ಗುಡಿಬಂಡೆ ಹಾಗೂ ಮಧುಗಿರಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು