ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಗಾರು ಮಳೆ: 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

Last Updated 26 ಜೂನ್ 2020, 18:52 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಬಿರುಸುಗೊಂಡಿದ್ದು, ಮುಂದಿನ ಐದು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇದೇ 27ರಿಂದ 29ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದು, ಮೂರೂ ದಿನಗಳವರೆಗೆ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ಬೀದರ್, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಭಾರಿ ಮಳೆಯಾಗಲಿದೆ.

ತುಮಕೂರು ಜಿಲ್ಲೆಯ ಕುಣಿಗಲ್‍ನಲ್ಲಿ 14 ಸೆಂ.ಮೀ ಗರಿಷ್ಠ ಮಳೆಯಾಗಿದೆ. ತಿಪಟೂರು, ಹೊಸದುರ್ಗ, ಆನೇಕಲ್ 10, ಯಲಬುರ್ಗಾ, ಅಥಣಿ 9, ಮೊಳಕಾಲ್ಮುರು, ಬೆಂಗಳೂರು 8, ಜಮಖಂಡಿ, ಹೊಸಕೋಟೆ 7, ಅಂಕೋಲಾ 6, ರಾಣಿಬೆನ್ನೂರು, ತಾಳಿಕೋಟೆ, ಚಿತ್ರದುರ್ಗ 5, ಕೋಟ, ಸಿಂಧನೂರು, ನರಗುಂದ, ರಾಮದುರ್ಗ, ಮಾಗಡಿ, ಕೋಲಾರ 4, ಕುಂದಾಪುರ, ಭಟ್ಕಳ, ಕಲಬುರ್ಗಿ, ನೆಲಮಂಗಲ, ದೊಡ್ಡಬಳ್ಳಾಪುರ, ರಾಮನಗರ ಹಾಗೂ ಮಾಲೂರುಗಳಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT