ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರದಿಂದ ಐದು ದಿನ ಭಾರಿ ಮಳೆ: 7 ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್'

Last Updated 5 ಜುಲೈ 2020, 17:15 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಇದೇ 6 ರಿಂದ 10ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸೋಮವಾರದಂದು ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

ಅರಬ್ಬಿ ಸಮುದ್ರದಿಂದ ರಾಜ್ಯದ ಕರಾವಳಿಯೆಡೆಗೆ ಗಂಟೆಗೆ 45ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಜು.7ರಿಂದ 9 ರವರೆಗೆ ಮಳೆ ಪ್ರಮಾಣ ಕಡಿಮೆ ಇರಲಿದೆ. ಈ ಭಾಗದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಎಷ್ಟು ಮಳೆ? : ಉತ್ತರ ಕನ್ನಡ ಜಿಲ್ಲೆಯ ಕದ್ರಾದಲ್ಲಿ ಭಾನುವಾರ 9 ಸೆಂ.ಮೀ ಮಳೆಯಾಗಿದೆ. ಮಂಗಳೂರು, ಕೊಲ್ಲೂರು 8, ಪಣಂಬೂರು, ಮೂಡುಬಿದ್ರೆ, ಉಡುಪಿ 7, ಕೋಟ, ಕುಂದಾಪುರ, ಕಳಸ 6, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಭಾಗಮಂಡಲ 5, ಪುತ್ತೂರು, ಧರ್ಮಸ್ಥಳ, ಸುಳ್ಯ, ಭಟ್ಕಳ, ಹೊಸನಗರ 3, ಕಾರವಾರ, ಶೃಂಗೇರಿ, ತೀರ್ಥಹಳ್ಳಿ 2, ಗದಗ, ನಿಪ್ಪಾಣಿ, ಬೆಳಗಾವಿ, ಸೋಮವಾರಪೇಟೆ, ಹಾಸನ, ಗೌರಿಬಿದನೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT