ಶುಕ್ರವಾರ, ನವೆಂಬರ್ 15, 2019
22 °C

ಸಿಡಿಲು ಬಡಿದು ಮೂವರ ಸಾವು

Published:
Updated:

ಬೆಂಗಳೂರು: ರಾಜ್ಯದ ವಿವಿಧೆಡೆ ಮಂಗಳವಾರ ಮಳೆಯಾಗಿದ್ದು, ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಕುದರಿಹಾಳ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಕೃಷಿ ಕೆಲಸ ಮಾಡುವಾಗ ಸಿಡಿಲು ಬಡಿದು ಶಿವಾನಂದಪ್ಪ ಬಾಲಣ್ಣವರ ಸಾವನ್ನಪ್ಪಿದ್ದಾರೆ.

ತುಮಕೂರು ಜಿಲ್ಲೆಯ ಹುಲಿಯೂರುದುರ್ಗದಲ್ಲಿ ಹೊಲದಲ್ಲಿ ರಾಸುಗಳಿಗೆ ಹುಲ್ಲು ಕೊಯ್ಯುತ್ತಿದ್ದ ಮಾದುಗೋನಹಳ್ಳಿ ಚಿಕ್ಕಯ್ಯ (58) ಮಂಗಳವಾರ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿ ಕಸುವಿನಹಳ್ಳಿ ಗ್ರಾಮದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಮಳೆಯಿಂದ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಿದ್ದ ಸಂದರ್ಭದಲ್ಲಿ ಪುಟ್ಟತಾಯಮ್ಮ (62) ಎಂಬುವರಿಗೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. 

ಕರಾವಳಿ ಹಾಗೂ ಮಲೆನಾಡಿನಲ್ಲಿ ಹಿಂಗಾರು ಮಳೆ ಆರ್ಭಟ ಹೆಚ್ಚಾಗಿದೆ. ಭಾರಿ ಮಳೆಗೆ ಉಡುಪಿ ತಾಲ್ಲೂಕಿನ ಭೈರಂಪಳ್ಳಿ ಹಾಗೂ ಪೆರ್ಡೂರು ನಡುವೆ ಸಂಪರ್ಕ ಕಲ್ಪಿಸುವ ರಸ್ತೆ ಕೊಚ್ಚಿ ಹೋಗಿದೆ.

ಪ್ರತಿಕ್ರಿಯಿಸಿ (+)