ಬಿರುಸಿನ ಮಳೆ: ಸಿಡಿಲಿಗೆ ಯುವಕ ಬಲಿ

ಗುರುವಾರ , ಏಪ್ರಿಲ್ 25, 2019
33 °C

ಬಿರುಸಿನ ಮಳೆ: ಸಿಡಿಲಿಗೆ ಯುವಕ ಬಲಿ

Published:
Updated:
Prajavani

ಹುಬ್ಬಳ್ಳಿ: ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಉಗ್ನಿಕೇರಿ ಗ್ರಾಮದಲ್ಲಿ ಸಿಡಿಲು ಬಡಿದು ಗಂಗಪ್ಪ ಚವರಗಿ (28) ಎಂಬುವವರು ಸೋಮವಾರ ಸಂಜೆ ಮೃತಪಟ್ಟಿದ್ದಾರೆ. ಅವರೊಂದಿಗಿದ್ದ ನಿಂಗಪ್ಪ ಕೊರವರ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಧಾರವಾಡ, ಬೆಳಗಾವಿ, ಹಾವೇರಿ, ಬಾಗಲಕೋಟೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಬಿರುಸಿನ ಮಳೆಯಾಗಿದೆ. ಬೆಳಗಾವಿ ಹಾಗೂ ಹುಬ್ಬಳ್ಳಿಯಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದೆ.

ಹುಬ್ಬಳ್ಳಿಯಲ್ಲಿ ಗಾಳಿಯ ರಭಸಕ್ಕೆ ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ಉರುಳಿವೆ. ಬೆಳಗಾವಿ ಜಿಲ್ಲೆಯ ಹಲವೆಡೆ ಹೊಲಗಳಲ್ಲಿ ಹಾಕಿದ್ದ ಶೆಡ್‌ನ ತಗಡಿನ ಶೀಟ್‌ಗಳು ಹಾರಿಹೋಗಿವೆ. ಹಿರೇಬಾಗೇವಾಡಿ, ಅಥಣಿ, ನಿಪ್ಪಾಣಿ, ಹುಕ್ಕೇರಿ, ಎಂ.ಕೆ. ಹುಬ್ಬಳ್ಳಿ ಹಾಗೂ ಖಾನಾಪುರದಲ್ಲಿ ಉತ್ತಮ ಮಳೆಯಾಗಿದ್ದು, ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ತುಂತುರಾಗಿ ಸುರಿದಿದೆ.

ಶಿರಸಿ, ಮುಂಡಗೋಡ, ದಾಂಡೇಲಿ ಮತ್ತು ಹಳಿಯಾಳ ತಾಲ್ಲೂಕಿನಲ್ಲಿ ಮಳೆಯಾಗಿದೆ. ದಾಂಡೇಲಿಯಲ್ಲಿ ತಗಡಿಶೀಟ್‌ ಬಿದ್ದು 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಕಲಬುರ್ಗಿ ನಗರ, ಚಿಂಚೋಳಿ ಹಾಗೂ ಶಹಾಬಾದ್ ತಾಲ್ಲೂಕಿನ ಹಲವೆಡೆ ಗುಡುಗು, ಮಿಂಚು, ಬಿರುಗಾಳಿ ಸಹಿತ ಬಿರುಸಿನ ಮಳೆ ಸುರಿಯಿತು.

ಬರಹ ಇಷ್ಟವಾಯಿತೆ?

 • 16

  Happy
 • 1

  Amused
 • 0

  Sad
 • 2

  Frustrated
 • 0

  Angry

Comments:

0 comments

Write the first review for this !