ಸೋಮವಾರ, ಸೆಪ್ಟೆಂಬರ್ 16, 2019
29 °C

ನಾಪೋಕ್ಲು ವ್ಯಾಪ್ತಿಯಲ್ಲಿ ಬಿರುಸಿನ ಮಳೆ

Published:
Updated:
Prajavani

ನಾಪೋಕ್ಲು (ಕೊಡಗು ಜಿಲ್ಲೆ): ಹೋಬಳಿ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ಬಿರುಸಿನ ಮಳೆ ಸುರಿದಿದೆ. ಮುತ್ತಾರುಮುಡಿ, ಮೂರ್ನಾಡು, ಹೊದ್ದೂರು ಸೇರಿದಂತೆ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.

ಸಮೀಪದ ಬೇತು ಗ್ರಾಮದಲ್ಲಿ ಗಾಳಿ, ಮಳೆಗೆ ಮರದ ರೆಂಬೆಗಳು ವಿದ್ಯುತ್ ತಂತಿ ಮೇಲೆ ಬಿದ್ದಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಚೆಟ್ಟಳ್ಳಿ, ತಲಕಾವೇರಿ, ಭಾಗಮಂಡಲ ಭಾಗದಲ್ಲೂ ಧಾರಾಕಾರ ಮಳೆಯಾಗಿದೆ. 

ಹಾಸನದಲ್ಲೂ ಮಳೆ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಸೋಮವಾರ ಒಂದು ತಾಸು ಬಿರುಸಿನ ಮಳೆಯಾಗಿದೆ. ಹಾಸನ ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಬೇಲೂರು ಪಟ್ಟಣದ ಹೊಸನಗರ ಬಡಾವಣೆಯಲ್ಲಿನ ಐದು ಮನೆಗಳ ಚಾವಣಿ ಹಾರಿ ಹೋಗಿವೆ. ಮಳೆ ನೀರು ಮನೆಯೊಳಗೆ ನುಗ್ಗಿ ಜನರು ತೊಂದರೆ ಅನುಭವಿಸಿದರು.

 

Post Comments (+)