ಶನಿವಾರ, ಜೂಲೈ 4, 2020
24 °C

ವಕೀಲರ ಕ್ಲರ್ಕ್ ಗಳಿಗೆ ನಿಧಿ ಸಂಗ್ರಹಿಸಿ: ಹೈಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆರ್ಥಿಕ ಸಂಕಷ್ಟದಲ್ಲಿರುವ ವಕೀಲರ ಕ್ಲರ್ಕ್ಗಳ ಆರ್ಥಿಕ ನೆರವಿಗೆ ಹಣ ಸಂಗ್ರಹಿಸಲು ಸಹಾಯ ಮಾಡುವಂತೆ ಬೆಂಗಳೂರು ವಕೀಲರ ಸಂಘಕ್ಕೆ ಹೈಕೋರ್ಟ್ ಸೂಚಿಸಿದೆ.

ಈ ಕುರಿತಂತೆ 'ಕರ್ನಾಟಕ ರಾಜ್ಯ ವಕೀಲರ ಕ್ಲರ್ಕ್ಗಳ ಸಂಘ' ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

'ಕ್ಲರ್ಕ್ಗಳ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವ ಹಾಗೂ ಅವರಿಗೆ ತುರ್ತು ಪರಿಹಾರ ನೀಡುವ ಸಂಬಂಧ ನಿಲುವು ತಿಳಿಸಿ' ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದ ನ್ಯಾಯಪೀಠ ಜೂನ್ 2ಕ್ಕೆ ವಿಚಾರಣೆ ಮುಂದೂಡಿದೆ.

ಅರ್ಜಿದಾರರ ಪರ ವಕೀಲ ಮೂರ್ತಿ ಎಸ್. ನಾಯಕ್ ವಾದ ಮಂಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು