ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘ ಪ್ರತಿಭಟನೆ

Last Updated 24 ಆಗಸ್ಟ್ 2019, 19:22 IST
ಅಕ್ಷರ ಗಾತ್ರ

ಬೆಂಗಳೂರು: ‘ಪ್ರವಾಹ ಬಂದು ತಿಂಗಳಾಗುತ್ತಾ ಬಂದರೂ ಕೇಂದ್ರ ಸರ್ಕಾರ ಯಾವುದೇ ಪರಿಹಾರ ಘೋಷಿಸಿಲ್ಲ. ಸಂತ್ರಸ್ತರಿಗೆ ತಕ್ಷಣವೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಆಗಸ್ಟ್‌ 26 ರಂದು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ಮಾಡುತ್ತೇವೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ರಾಜ್ಯದ 22 ಜಿಲ್ಲೆಗಳಲ್ಲಿ ಸುಮಾರು 14.81 ಲಕ್ಷ ಎಕರೆ ಪ್ರದೇಶದ ಬೆಳೆ ನಾಶವಾಗಿದೆ. ಪ್ರವಾಹದಿಂದ ಉತ್ತರ ಕರ್ನಾಟಕದ ಜನರ ಬದುಕೇ ಅತಂತ್ರವಾಗಿದೆ. ಇದಕ್ಕಾಗಿ ₹ 1 ಲಕ್ಷ ಕೋಟಿ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT